ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ: ತನಿಖೆಯಲ್ಲಿ ಸಾವಿನ ಅಸಲಿ ಕಾರಣ ಬಯಲು..!

ಆರಂಭದಲ್ಲಿ ಯುವತಿಯ ತಾಯಿ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದರೂ, ರಾತ್ರಿ 10 ಗಂಟೆಯವರೆಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ.

ಮೃತಳನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಆಕೆ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾಳೆ ಎಂಬುದು ತಿಳಿದುಬಂದಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ಗುರುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ನಡೆದಿದೆ. ಫಲಿತಾಂಶ ಪ್ರಕಟವಾದ ಬಳಿಕ ಮನೆಯಲ್ಲಿದ್ದ ವೇಳೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಹಾಲ್ ಟಿಕೆಟ್ ಮಾತ್ರ ಹಾಸಿಗೆಯ ಮೇಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖಾಧಿಕಾರಿಗಳ ಪ್ರಾಥಮಿಕ ವಿಚಾರಣೆಯ ಪ್ರಕಾರ ಇದು ಸ್ಪಷ್ಟವಾದ ಆತ್ಮಹತ್ಯೆ ಪ್ರಕರಣವಾಗಿದ್ದು, ಫಲಿತಾಂಶದ ಬಳಿಕ ಉಂಟಾದ ಮಾನಸಿಕ ಒತ್ತಡವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ವಿದ್ಯಾರ್ಥಿನಿ ಫಲಿತಾಂಶ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿದ್ದಾಳೆ ಎಂಬ ಮಾಹಿತಿಯೂ ದೊರೆತಿದೆ.

File photo
ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು

ಮನೆಯವರ ದೂರಿನ ಆಧಾರದ ಮೇಲೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಆರಂಭದಲ್ಲಿ ಯುವತಿಯ ತಾಯಿ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದರೂ, ರಾತ್ರಿ 10 ಗಂಟೆಯವರೆಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಷ್ಟೇ ಅಲ್ಲದೆ, ಪೊಲೀಸರಿಗೆ ತಿಳಿಸದೆಯೇ 4-5 ಯುವಕರ ಸಹಾಯದಿಂದ ತಾಯಿಯೇ ಮೃತದೇಹವನ್ನು ಕೆಳಕ್ಕೆ ಇಳಿಸಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದರು.

ಘಟನೆ ನಡೆದು 8 ಗಂಟೆಗಳ ಕಾಲ ಮಾಹಿತಿ ಮುಚ್ಚಿಟ್ಟಿರುವುದು ಯಾಕೆ ಎಂಬುದರ ಕುರಿತು ಪ್ರಶ್ನೆಗಳು ಮೂಡಿದ್ದವು. ಅಲ್ಲದೆ, ತಾಯಿಯೇ ಮಗಳನ್ನು ಕೊಂದು ನೇಣು ಹಾಕಿರಬಹುದು ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದರು.

ಆದರೆ, ವಿದ್ಯಾರ್ಥಿನಿ ಗಣಿತ ಮತ್ತು ರಾಸಾಯನಶಾಸ್ತ್ರ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು. ಇದರಿಂದ ತೀವ್ರ ಮನನೊಂದಿದ್ದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂಬುದು ತನಿಖೆಯಿಂದ ತಿಳಿದುಬಂದಿದೆ.

ಸಾವಿಗೂ ಮುನ್ನ ಯುವತಿ ಸೋಶಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ‘3 PM fielding set’ ಎಂದು ಬರೆದುಕೊಂಡಿದ್ದಳು. ಇದನ್ನು ಗಮನಿಸಿದ ಆಕೆಯ ಸ್ನೇಹಿತೆ ಗಾಬರಿಗೊಂಡು ‘ನಮ್ಮ ಮನೆಗೆ ಬಾ’ ಎಂದು ಮೆಸೇಜ್ ಮಾಡಿದ್ದಳು. ತನುಶ್ರೀ ಕೂಡ ‘ಸರಿ ಬರ್ತೀನಿ’ ಎಂದು ಉತ್ತರಿಸಿದ್ದಳು.

ಆದರೂ ಸಮಾಧಾನಗೊಳ್ಳದ ಸ್ನೇಹಿತ ತಕ್ಷಣೆ ಮನೆಗೆ ಹೋಗಿದ್ದು, ಅಷ್ಟರಲ್ಲಾಗಲೇ ತನುಶ್ರೀ ನೇಣು ಬಿಗಿದುಕೊಂಡಿದ್ದಳು ಎಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com