ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು

ಇದೀಗ ಯುವತಿ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ತನ್ನ ಸಾವಿಗೆ ಉಪನ್ಯಾಸಕಿ ಕಾರಣ ಎಂದು ಬರೆದಿದ್ದಾಳೆ. ಆಕೆ ತನಗೆ ಮಾನಸಿಕ ಕಿರುಕುಳ ನೀಡಿದ್ದು, ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಉಪನ್ಯಾಸಕಿಯೊಬ್ಬರು ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸುಭಾಷನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ದೊಡ್ಡಬಳ್ಳಾಪುರದ ಸುಭಾಷನಗರ ನಿವಾಸಿ ಎಸ್. ಗೌತಮಿ ಎಂದು ಗುರುತಿಸಲಾಗಿದೆ. ಏಪ್ರಿಲ್.4ರಂದು ಘಟನೆ ನಡದಿತ್ತು. ಮಗಳು ಚಿಕಿತ್ಸೆ ಪಡೆಯುತ್ತಿದ್ದು, ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೋಷಕರು ನಂಬಿದ್ದರು.

ಆದರೆ, ಇತ್ತೀಚೆಗೆ ಗೌತಮಿ ಕೊಠಡಿ ಸ್ವಚ್ಛಗೊಳಿಸಲು ಮುಂದಾದಾಗ ತಾಯಿಗೆ ಡೆತ್ ನೋಟ್ ಸಿಕ್ಕಿದೆ. ಇದರ ಬೆನ್ನಲ್ಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಾರ್ವಜನಿಕ ವಲಯದ ಕಂಪನಿಯಲ್ಲಿ ಸಹಾಯಕ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿರುವ ಗೌತಮಿಯ ತಂದೆ ವಿ.ಎಲ್. ಸೋಮಶೇಖರಯ್ಯ ಅವರು ಏಪ್ರಿಲ್ 4 ರಂದು ಸಂಜೆ 5.15 ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗಿದ ನಂತರ ಮಗಳು ಮೃತಪಟ್ಟಿರುವುದು ಕಂಡುಬಂದಿತ್ತು.

File photo
ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಮದ್ವೆಗೆ ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ; ಕಾಲೇಜ್​​ ಲವ್ ದುರಂತ ಅಂತ್ಯ!

ಆ ದಿನ ಗೌತಮಿ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ತಾಯಿ ಮತ್ತು ಅಕ್ಕ ತಮ್ಮ ಊರಿಗೆ ಹೋಗಿದ್ದರು. ಸೋಮಶೇಖರಯ್ಯ ಬಾಗಿಲು ತೆರೆಯಲು ಕರೆ ಮಾಡಿದಾಗ ಗೌತಮಿ ಪ್ರತಿಕ್ರಿಯಿಸಲಿಲ್ಲ. ಅನುಮಾನಗೊಂಡ ಅವರು ಬಾಗಿಲು ಒಡೆದು ನೋಡಿದಾಗ ಗೌತಮಿ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು, ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿತ್ತು.

ಇದೀಗ ಯುವತಿ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ತನ್ನ ಸಾವಿಗೆ ಉಪನ್ಯಾಸಕಿ ಕಾರಣ ಎಂದು ಬರೆದಿದ್ದಾಳೆ. ಆಕೆ ತನಗೆ ಮಾನಸಿಕ ಕಿರುಕುಳ ನೀಡಿದ್ದು, ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

ಇದೀಗ ಯುವತಿಯ ಪೋಷಕರ ದೂರು ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com