ಶಿವಮೊಗ್ಗ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು, 5 ಲಕ್ಷ ರೂ ಪರಿಹಾರ ಘೋಷಣೆ!

ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
CM Siddaramaiah Casual Images and tragedy images
ಸಿಎಂ ಸಿದ್ದರಾಮಯ್ಯ, ಶಿವಮೊಗ್ಗ ದುರಂತದ ಚಿತ್ರ
Updated on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುರುವಾರ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com