ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

"ಅನಂತಕುಮಾರ್ ಹೆಗಡೆ ಅವರ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು"
Former MP Ananth Kumar Hegde
ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದು ಮತ್ತು ಮಾಜಿ ಸಂಸದ ಅನಂತಕುಮಾರ್ ಹೆಗಡೆ
Updated on

ಬೆಂಗಳೂರು: ಬಿಜೆಪಿ ಫೈರ್‌ಬ್ರ್ಯಾಂಡ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು, ತಮ್ಮ ಪುತ್ರ ಅಶುತೋಷ್ ಹೆಗಡೆ ವಿರುದ್ಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ಪುತ್ರನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು.

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪರ ವಕೀಲರು, "ಅನಂತಕುಮಾರ್ ಅವರ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು" ಎಂದು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಪೀಠಕ್ಕೆ ಮನವಿ ಮಾಡಿದರು.

Former MP Ananth Kumar Hegde
ಹಿಂದೂ ದೇವತೆ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

"ಘಟನೆ ನಡೆದಾಗ ಅಶುತೋಷ್ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದರು. ಆ ಕಾರಿನ ವಿನ್ಯಾಸದ ಪ್ರಕಾರ ಮಧ್ಯದ ಸೀಟುಗಳನ್ನು ತೆಗೆದರೆ ಮಾತ್ರ ಹಿಂದಿನವರು ಇಳಿಯಲು ಸಾಧ್ಯ. ಅವರು ಘಟನಾ ಸ್ಥಳಕ್ಕೆ ಬಂದೇ ಇರಲಿಲ್ಲ. ಆದರೂ ತನಿಖಾಧಿಕಾರಿಯು ಅಶುತೋಷ್ ಅವರನ್ನು ಅನಾವಶ್ಯಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಪರ ವಕೀಲರು ವಾದಿಸಿದರು.

ಇದಕ್ಕೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, "ಅನಂತಕುಮಾರ್ ಹೆಗಡೆ, ಅವರ ಅಂಗರಕ್ಷಕ ಮತ್ತು ಕಾರಿನ ಚಾಲಕ ದೂರುದಾರರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಲಭ್ಯವಿದೆ. ಸದ್ಯಕ್ಕೆ ನಮ್ಮ ಬಳಿ ಆರೋಪಪಟ್ಟಿಯ ಪ್ರತಿ ಇಲ್ಲದಿದ್ದರೂ, ಮುಂದಿನ ವಿಚಾರಣೆ ವೇಳೆಗೆ ನಾಲ್ಕನೇ ಆರೋಪಿ ಅಶುತೋಷ್‌ಗೆ ಸಂಬಂಧಿಸಿದಂತೆ ಸಂಪೂರ್ಣ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು" ಎಂದು ತಿಳಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಅನಂತಕುಮಾರ್ ಹೆಗಡೆ ಅವರ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com