ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ತನಿಖೆ ಕೋರಿ CS ಶಾಲಿನಿ ರಜನೀಶ್ ಪತ್ರ

ಏಪ್ರಿಲ್ 10ರಂದು ಬರೆದಿರುವ ಈ ಪತ್ರದಲ್ಲಿ, ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ (Executive Council - EC) ಸಭೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.
Shalini Rajaneesh
ಶಾಲಿನಿ ರಜನೀಶ್
Updated on

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (Central University of Karnataka) ಸಾಮಾನ್ಯ ನೇಮಕಾತಿ ಪ್ರಕ್ರಿಯೆಯಲ್ಲಿ, ವಿಶೇಷವಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ನಡೆದಿರುವ ಅಕ್ರಮಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ.

ಏಪ್ರಿಲ್ 10ರಂದು ಬರೆದಿರುವ ಈ ಪತ್ರದಲ್ಲಿ, ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ (Executive Council - EC) ಸಭೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. ಇದರಿಂದ ಮುಖ್ಯ ಕಾರ್ಯದರ್ಶಿ ಮತ್ತು ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಸದಸ್ಯರು ವಿಶ್ವವಿದ್ಯಾಲಯದ ಆಡಳಿತದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಯವರ ಪ್ರಕಾರ, PRO ಹುದ್ದೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ಕಂಡುಬಂದಿವೆ ಎಂಬ ಆರೋಪಗಳೊಂದಿಗೆ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿ ಬಂದಿದೆ. ಅದರಂತೆ, ಶ್ರೀಕಾಂತ್ ಕುಸೂರ್ ಎಂಬ ಅಭ್ಯರ್ಥಿ ಪ್ರಕಟಣೆಯಲ್ಲಿ ನಿರ್ದಿಷ್ಟಪಡಿಸಿದಂತೆ Audit Bureau of Circulations ಮಾನ್ಯತೆ ಹೊಂದಿರದ ಪತ್ರಿಕೆಯಿಂದ ಅನುಭವ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವಿದೆ.

ಇದಲ್ಲದೆ, 70ಕ್ಕೂ ಹೆಚ್ಚು ಅಭ್ಯರ್ಥಿಗಳು ನ್ಯಾಯಸಮ್ಮತ ನೇಮಕಾತಿ ಪ್ರಕ್ರಿಯೆಯನ್ನು ಕೇಳುತ್ತಿದ್ದಾರೆ. ಮಾರ್ಚ್ 12ರಂದು ಕೇಂದ್ರ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ಸಲ್ಲಿಸಿದ ಹಿಂದಿನ ದೂರುಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕೂಡ ತಿಳಿಸಿದ್ದಾರೆ.

Shalini Rajaneesh
ಹಿಜಾಬ್ ಧರಿಸುವಂತೆ ಒತ್ತಾಯ: ಸಹಾಯಕ ಪ್ರಾಧ್ಯಾಪಕರ ವಿರುದ್ಧ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತನಿಖೆ ಆರಂಭ

ಈ ಹಿನ್ನೆಲೆಯಲ್ಲಿ, ಶಾಲಿನಿ ರಾಜನೀಶ್ ಅವರು ನೇಮಕಾತಿ ಪ್ರಕ್ರಿಯೆಯ ಬಗ್ಗೆ ತಕ್ಷಣ ತನಿಖೆ ಆರಂಭಿಸುವಂತೆ ಕೇಂದ್ರ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ. ಜೊತೆಗೆ, ಕಾರ್ಯಕಾರಿ ಮಂಡಳಿ ಸಭೆಯನ್ನು ಮುಂದೂಡುವಂತೆ ಹಾಗೂ ರಾಜ್ಯ ಸರ್ಕಾರಕ್ಕೆ ಸಮಗ್ರ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಮುಂದಿನ ಕಾರ್ಯಕಾರಿ ಮಂಡಳಿ ಸಭೆಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವಂತೆ ಕುಲಪತಿಗೆ ನಿರ್ದೇಶನ ನೀಡಬೇಕೆಂದೂ ಅವರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಪ್ರೊ. ಆರ್.ಆರ್. ಬಿರಾದಾರ್ ಅವರು, ಕುಸೂರ್ ಅವರ ನೇಮಕಾತಿ ಮೂಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ಮಾಡಲಾಗಿದೆ ಮತ್ತು ಎಲ್ಲಾ ಕ್ರಮಗಳನ್ನು ಸರಿಯಾಗಿ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com