TNIEಯ ರಾಮು ಪಾಟೀಲ್ ಗೆ ಭೀಮಣ್ಣ ಖಂಡ್ರೆ ಸ್ಮಾರಕ ಪ್ರಶಸ್ತಿ

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೀದರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಕಾರ್ಯಕ್ರಮ ಆಯೋಜನೆಯಲ್ಲಿ ಶ್ರಮಿಸಿದವರನ್ನೂ ಸನ್ಮಾನಿಸಿದರು.
Chief Minister Siddaramaiah presents the Bhimanna Khandre Memorial Award to TNIE Assistant Resident Editor Ramu Patil at the 40th State Journalists’ Conference
ಬೀದರ್ ನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಎನ್‌ಐಇ ಸಹಾಯಕ ಸ್ಥಾನಿಕ ಸಂಪಾದಕ ರಾಮು ಪಾಟೀಲ್ ಅವರಿಗೆ ಭೀಮಣ್ಣ ಖಂಡ್ರೆ ಸ್ಮಾರಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
Updated on

ಬೀದರ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಹಾಯಕ ಸ್ಥಾನಿಕ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರಾಮು ಪಾಟೀಲ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಜಿಲ್ಲಾ ಘಟಕವು ಬೀದರ್ ನ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ 40ನೇ ರಾಜ್ಯ ಸಮ್ಮೇಳನದಲ್ಲಿ ಲೋಕನಾಯಕ ಭೀಮಣ್ಣ ಖಂಡ್ರೆ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೀಡಿದ ಮಹತ್ವದ ಕೊಡುಗೆಗಾಗಿ ರಾಮು ಪಾಟೀಲ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 25 ವರ್ಷಗಳಿಗಿಂತ ಹೆಚ್ಚು ಕಾಲದಿಂದ ತಮ್ಮ ಪತ್ರಕರ್ತ ವೃತ್ತಿಜೀವನದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಮುಖ ವಿಷಯಗಳ ಕುರಿತು ಹಲವು ಪರಿಣಾಮಕಾರಿ ಲೇಖನಗಳನ್ನು ಅವರು ಬರೆದಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೀದರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಕಾರ್ಯಕ್ರಮ ಆಯೋಜನೆಯಲ್ಲಿ ಶ್ರಮಿಸಿದವರನ್ನೂ ಸನ್ಮಾನಿಸಿದರು. ಜೊತೆಗೆ, ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಛಾಯಾಚಿತ್ರ ಮತ್ತು ಕಾರ್ಟೂನ್ ಪ್ರದರ್ಶನವನ್ನು ಹಾಗೂ ಮಾಧ್ಯಮ ಮಳಿಗೆಗಳನ್ನು ಉದ್ಘಾಟಿಸಿದರು.

Chief Minister Siddaramaiah presents the Bhimanna Khandre Memorial Award to TNIE Assistant Resident Editor Ramu Patil at the 40th State Journalists’ Conference
ಭೀಮಣ್ಣ ಖಂಡ್ರೆ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರನ ಅಂತ್ಯಕ್ರಿಯೆ

ಕಾರ್ಯಕ್ರಮದಲ್ಲಿ ಹರಕುಡ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಧಾರ್ಮಿಕ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಬೀದರ್ ಜಿಲ್ಲೆ ಸಂಸದ ಸಾಗರ್ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಹಲವು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಹಿರಿಯ ಸಂಪಾದಕರು ಮತ್ತು ರಾಜ್ಯದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬಡೋಳೆ, ಪೊಲೀಸ್ ಅಧೀಕ್ಷಕ ಪ್ರದೀಪ್ ಗುಂಟಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮುಖುಲ್ ಜೈನ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಪತ್ರಕರ್ತರು ಮತ್ತು ಮಾಧ್ಯಮ ವೃತ್ತಿಪರರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com