ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದಲೇ ಅಬ್ದುಲ್‌ ಜಬ್ಬಾರ್ ಅಮಾನತು!

ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶಿಸಿದ್ದಾರೆ.
abdul jabbar
ಅಬ್ದುಲ್‌ ಜಬ್ಬಾರ್‌
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶಿಸಿದ್ದಾರೆ.

'ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿಯಾದ ವಿಧಾನ ಪರಿಷತ್ ಸದಸ್ಯ ಶ್ರೀ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮೂಲಕ ಚುನಾವಣಾ ಸಂದರ್ಭದಲ್ಲಿ ಪಕ್ಷದ ನಿರ್ಧಾರಗಳನ್ನು ಮೀರಿ ನಡೆಯುವವರಿಗೆ ಪಕ್ಷವು ಎಚ್ಚರಿಕೆಯನ್ನು ನೀಡಿದೆ.

abdul jabbar
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಾಸೀರ್ ಅಹ್ಮದ್ ವಜಾ..!

ಎಷ್ಟೇ ದೊಡ್ಡ ನಾಯಕರಾಗಿದ್ದರೂ ಪಕ್ಷದ ಶಿಸ್ತನ್ನು ಮೀರಿದರೆ ಕ್ರಮ ಅನಿವಾರ್ಯ ಎಂಬ ಸಂದೇಶವನ್ನು ಡಿ.ಕೆ. ಶಿವಕುಮಾರ್ ರವಾನಿಸಿದ್ದಾರೆ.

ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಅಬ್ದುಲ್ ಜಬ್ಬಾರ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿಚಾರವಾಗಿ ಕೆಪಿಸಿಸಿ ಶಿಸ್ತು ಸಮಿತಿಗೆ ದೂರುಗಳು ಸಲ್ಲಿಕೆಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com