ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ನಿಷೇಧಿತ ಮಾದಕ ವಸ್ತುಗಳ ಮಾರಾಟ; 10 ಮಂದಿ ಬಂಧನ; 11.81 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!

ವಶಪಡಿಸಿಕೊಂಡ ಮಾದಕ ವಸ್ತುಗಳು 11.81 ಕೋಟಿ ರೂ. ಮೌಲ್ಯದ್ದಾಗಿದ್ದು, ಅಂದಾಜು ಮಾರುಕಟ್ಟೆ ಮೌಲ್ಯ 23.63 ಕೋಟಿ ರೂಪಾಯಿ ಎಂದು ಹೇಳಿದ್ದಾರೆ.
representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ಪೊಲೀಸರು ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ, ನಗರದ ಕೆಲವು ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ 10 ಜನರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ವಿದೇಶಿ ಪ್ರಜೆಗಳು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು 5 ಕೆಜಿ 919 ಗ್ರಾಂ ಎಂಡಿಎಂಎ (ಸ್ಫಟಿಕ), 1 ಕೆಜಿ 151 ಗ್ರಾಂ ಕೊಕೇನ್, 21 ಕೆಜಿ ಗಾಂಜಾ, 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳು ಮತ್ತು ಅಪರಾಧ ಕೃತ್ಯಕ್ಕೆ ಬಳಸಲಾಗುವ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಮಾದಕ ವಸ್ತುಗಳು 11.81 ಕೋಟಿ ರೂ. ಮೌಲ್ಯದ್ದಾಗಿದ್ದು, ಅಂದಾಜು ಮಾರುಕಟ್ಟೆ ಮೌಲ್ಯ 23.63 ಕೋಟಿ ರೂಪಾಯಿ ಎಂದು ಹೇಳಿದ್ದಾರೆ..

ಯಲಹಂಕ ನ್ಯೂ ಟೌನ್, ಡಿ ಜೆ ಹಳ್ಳಿ, ಕೋರಮಂಗಲ, ಬೊಮ್ಮನಹಳ್ಳಿ ಮತ್ತು ಪುಲಕೇಶಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (ಸ್ಫಟಿಕ), ಕೊಕೇನ್, ಗಾಂಜಾ ಮತ್ತು ಎಕ್ಸ್‌ಟೆಸಿ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು.

representational image
ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಆತಂಕ: ವೈರಲ್ ವೀಡಿಯೋ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ; ಹೇಳಿದ್ದೇನು..?

ಖಚಿತ ಮಾಹಿತಿಯ ಮೇರೆಗೆ ಆಯಾ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ (ಮಾದಕ ಔಷಧಗಳು ಮತ್ತು ಮನೋವಿಕೃತ ವಸ್ತುಗಳು) ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಗುರುತಿಸಲಾದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಾರ್ಯಾಚರಣೆಗಳ ಸಮಯದಲ್ಲಿ, ಒಟ್ಟು 10 ಆರೋಪಿಗಳನ್ನು ವಿವಿಧ ದಿನಾಂಕಗಳಲ್ಲಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶೀಘ್ರವಾಗಿ ಹಣ ಗಳಿಸುವ ಉದ್ದೇಶದಿಂದ, ವಿದೇಶಿ, ಅಂತರರಾಜ್ಯ ಮತ್ತು ಸ್ಥಳೀಯ ಪೂರೈಕೆದಾರರಿಂದ ಕಡಿಮೆ ಬೆಲೆಗೆ ಎಂಡಿಎಂಎ (ಸ್ಫಟಿಕ), ಕೊಕೇನ್, ಗಾಂಜಾ ಮತ್ತು ಎಕ್ಸ್ ಟೆಸಿ ಮಾತ್ರೆಗಳಂತಹ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದರು ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದುದ್ದಾಗಿ ವಿಚಾರಣೆ ಸಮಯದಲ್ಲಿ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮಾದಕ ವಸ್ತುಗಳ ಪೂರೈಕೆಯಲ್ಲಿ ಭಾಗಿಯಾಗಿರುವ ವಿದೇಶಿ ಮತ್ತು ಅಂತರರಾಜ್ಯ ಪೂರೈಕೆದಾರರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ 10 ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com