ಬೆಂಗಳೂರಿನಲ್ಲಿ ಸೆಕ್ಸ್ ದಂಧೆ: ಹಲವು ಕಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ; ನಾಲ್ವರ ಬಂಧನ, ನಾಲ್ವರ ರಕ್ಷಣೆ

ಮನುವನ, ವಿಜಯನಗರ, ರಾಮಸ್ವಾಮಿಪಾಳ್ಯ, ಬಾಣಸವಾಡಿ, ಅಂದ್ರಹಳ್ಳಿ, ವೀರಭದ್ರೇಶ್ವರನಗರ ಮತ್ತು ಬ್ಯಾಡರಹಳ್ಳಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು, ಅಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
Prostitution racket busted
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಾದ್ಯಂತ ಹಲವು ಕಡೆ ಬಾಡಿಗೆ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ ಮತ್ತು ಇತರ ರಾಜ್ಯಗಳ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದಿನಗಳಿಂದ ಸಂಗ್ರಹಿಸಿದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳ ಈ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಮನುವನ, ವಿಜಯನಗರ, ರಾಮಸ್ವಾಮಿಪಾಳ್ಯ, ಬಾಣಸವಾಡಿ, ಅಂದ್ರಹಳ್ಳಿ, ವೀರಭದ್ರೇಶ್ವರ ನಗರ ಮತ್ತು ಬ್ಯಾಡರಹಳ್ಳಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು, ಅಲ್ಲಿ ಮಹಿಳೆಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

Prostitution racket busted
ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ; ವೇಶ್ಯಾವಾಟಿಕೆ ದಂಧೆ ಆರೋಪ; Video

ನಿರ್ದಿಷ್ಟ ಮಾಹಿತಿಯ ಮೇರೆಗೆ, ಈ ಸ್ಥಳಗಳಲ್ಲಿ ಸಂಘಟಿತ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ, ವೇಶ್ಯಾವಾಟಿಕೆಗೆ ಬಲವಂತವಾಗಿ ತಳ್ಳಲ್ಪಟ್ಟ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ಸೆಕ್ಸ್ ದಂಧೆಯನ್ನು ನಡೆಸುತ್ತಿದ್ದ ಆರೋಪ ಮೇಲೆ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಗ್ರಾಹಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ಏರ್ಪಡಿಸಿ ಹೆಚ್ಚಿನ ಹಣ ಗಳಿಸಲು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ವಿಜಯನಗರ, ಬಾಣಸವಾಡಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com