SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.
High court
ಹೈಕೋರ್ಟ್
Updated on

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಲಾಗುವುದು ಮತ್ತು ವಾರ್ಷಿಕ ಪರೀಕ್ಷೆಯ ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತೀವ್ರ ಹಿನ್ನಡೆಯಾಗಿದೆ.

ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರದ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಿರಾಳವಾದಂತಾಗಿದೆ.

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

High court
SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.

ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣತಜ್ಞರು, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಸಾರ್ವಜನಿಕರಿಂದ ವ್ಯತಿರಿಕ್ತ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು.

ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ಈ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com