

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೂವರು ಮುಖಂಡರ ಉಚ್ಛಾಟನೆಗೆ ಶಿಫಾರಸ್ಸು ಮಾಡಲಾಗಿದೆ.
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಮತ ಯಾಚಿಸದೇ ಬಿಜೆಪಿಗೆ ಮತ ಹಾಕುವಂತೆ ಪ್ರಚಾರ ಮಾಡಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣ ಪಂಚಾಯತ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ್ ಹಾಗೂ ಹಿರಿಯ ಮುಖಂಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್ ರಾಂಪೂರ ಜಿಲ್ಲಾ ಕಾಂಗ್ರೆಸ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ.
Advertisement