

ತುಮಕೂರು: ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎ.ಎನ್. ಕಾಂತಮ್ಮ(43) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ
ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, 2025 ಜೂನ್‌ನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ ನ್ಯಾ.ಕಾಂತಮ್ಮ ವಸತಿ ಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಮಧುಗಿರಿ ತಾಲೂಕಿನ ವಕೀಲರು, ನ್ಯಾಯಾಲಯದ ಸಿಬ್ಬಂದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
Advertisement