ಯಾದಗಿರಿ: ಕಾರು-ಖಾಸಗಿ ಬಸ್​​ ಮುಖಾಮುಖಿ ಡಿಕ್ಕಿ; 6 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
Vehicle burnt
ಅಪಘಾತ ತೀವ್ರತೆಗೆ ಹೊತ್ತಿ ಉರಿದ ವಾಹನಗಳು
Updated on

ಯಾದಗಿರಿ: ಕಾರು ಮತ್ತು ಖಾಸಗಿ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

Vehicle burnt
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ 'ಶುದ್ಧ ತಿಂಡಿ' ಹೋಟೆಲ್ ಸುಟ್ಟು ಭಸ್ಮ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com