ಚಿರತೆಯಿಂದ ಅತ್ತೆ ರಕ್ಷಿಸಿದ ಸೊಸೆಗೆ 'ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವೆ Lakshmi Hebbalkar!

ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Mysuru woman braves leopard to save mother-in-law
ಅತ್ತೆ ರಕ್ಷಿಸಿದ ಸುಜಾತಾ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Updated on

ಬೆಂಗಳೂರು: ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದಕ್ಕೆ ಚಿರತೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದು, ಅತ್ತೆಯನ್ನು ರಕ್ಷಿಸಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆ ನೀಡಿದ್ದಾರೆ.

ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ಅವರಿಗೆ ಪ್ರಶಸ್ತಿ ನೀಡುವ ಭರವಸೆ ನೀಡಿದ್ದಾರೆ.

ಚಿರತೆಯಿಂದ (Leopard) ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆ ನೀಡಿದ್ದು, ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Mysuru woman braves leopard to save mother-in-law
Mysuru: ಮಂಚದ ಕೆಳಗೆ ಅವಿತಿದ್ದ ಚಿರತೆ; ವೃದ್ಧ ತಾಯಿಯ ಹೊರಗೆಳೆದ ಮಗಳು; ಕಾರ್ಯಾಚರಣೆಯೇ ರೋಚಕ!

ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ.

ಅಲ್ಲದೆ ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾಗಿ, ಸುಜಾತಾ ಅವರ ಈ ಅಸಾಧಾರಣ ಶೌರ್ಯವನ್ನ ನಾನು ಮನತುಂಬಿ ಶ್ಲಾಘಿಸುತ್ತೇನೆ. ಅವರ ಈ ಸಾಹಸವನ್ನ ಗೌರವಿಸಲು ಮುಂದಿನ ವರ್ಷದ ʻಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿʼ ಗೆ ಅವರ ಹೆಸರನ್ನು ಪರಿಗಣಿಸಲು ನಮ್ಮ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ʻಧೈರ್ಯವಂತ ಮಹಿಳೆಯರೇ ಈ ನಾಡಿನ ನಿಜವಾದ ಶಕ್ತಿ. ಸುಜಾತಾ ಅವರ ಈ ಶೌರ್ಯದ ಗಾಥೆ ಮನೆಮನಗಳಿಗೆ ತಲುಪಲಿ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com