ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ

ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.
Lorry Turned
ಅಪಘಾತದಿಂದ ಪಲ್ಟಿಯಾದ ಲಾರಿ
Updated on: 

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರದ ಬಳಿ ಇಂದು ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸರಣಿ ಅಪಘಾತದಲ್ಲಿ ಒಟ್ಟು ಇಪ್ಪತ್ತು ಜನ ಗಾಯಗೊಂಡಿದ್ದು, ಅದರಲ್ಲಿ 14 ಜನರು ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.

ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳ ಯೋಗಕ್ಷೇಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಿಸಿದರು.

ಮೂರು ದ್ವಿಚಕ್ರ ವಾಹನ, ಒಂದು ಕೆ ಎಸ್ ಆರ್ ಟಿ ಸಿ ಬಸ್, ಒಂದು ಕ್ಯಾಂಟರ್ ಮತ್ತು ಒಂದು ಕಾರಿಗೆ ಎದುರು ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಸರಣಿ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ತಿಮ್ಮಲಾಪುರದ 50 ವರ್ಷದ ದುರ್ಗಪ್ಪ, ಕಿತ್ತನೂರಿನ 40 ವರ್ಷದ ಸುಜಾತ ಎಂದು ಗುರುತಿಸಲಾಗಿದೆ.

ಲಾರಿಯ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆರಂಭದಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತಾದರೂ, ಮೃತಪಟ್ಟಿರೋದು ಇಬ್ಬರು ಮಾತ್ರ ಎಂದು ಎಸ್ಪಿ ಜಾಹ್ನವಿ ಮಾಹಿತಿ ನೀಡಿದ್ದಾರೆ.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com