ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್‌ಮೇಲ್ ಆರೋಪ: ಉದ್ಯಮಿ ಬಂಧನ

ಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.
ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್‌ಮೇಲ್ ಆರೋಪ: ಉದ್ಯಮಿ ಬಂಧನ
Updated on

ಬೆಂಗಳೂರು: ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಪಾಲನಿ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ 50 ಮಂದಿಗೆ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಕೇಸಲ್ಲಿ ಪುಲಕೇಶಿ ನಗರ ಪೊಲೀಸರು ಕೃಪಾಲನಿಯನ್ನು ಬಂಧಿಸಿದ್ದಾರೆ.

ಕೃಪಲಾನಿ ಆರಂಭದಲ್ಲಿ ವಿಚಾರಣೆಯ ಸಮಯದಲ್ಲಿ ಸಹಕರಿಸಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಅವರ ಫೋನ್ ಮತ್ತು ಇತರ ಡೇಟಾ ಸೇರಿದಂತೆ ತಾಂತ್ರಿಕ ಪುರಾವೆಗಳು ಅನೇಕ ಮಹಿಳೆಯರು ಈತನ ಪಾಶಕ್ಕೆ ಬಲಿಯಾಗಿದ್ದರು ಎಂದು ತಿಳಿದುಬಂದಿದೆ.

ಕೆಲಸದ ನೆಪದಲ್ಲಿ ಅವರು ಮಹಿಳಾ ಅಧಿಕಾರಿಗಳನ್ನು ಸಂಪರ್ಕಿಸುತ್ತಿದ್ದ, ಅವರ ವಿಶ್ವಾಸ ಗಳಿಸಿದೆ ನಂತರ ಅವರನ್ನು ಭೋಜನಕ್ಕೆ ಆಹ್ವಾನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದು ನಂತರ ನಿಕಟ ಸಂಬಂಧಗಳಾಗಿ ಬೆಳೆಯಿತು, ಈ ಸಮಯದಲ್ಲಿ ಆತ ದೈಹಿಕ ಸಂಬಂಧ ಹೊಂದಲು ಮದುವೆಯ ಭರವಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್‌ಮೇಲ್ ಆರೋಪ: ಉದ್ಯಮಿ ಬಂಧನ
ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video

ತನ್ನ ಬೇಡಿಕೆ ಈಡೇರಿಸಿದಿದ್ದರೇ ಅವರ ಖಾಸಗಿ ಫೋಟೋಗಳು ಅಥವಾ ವೀಡಿಯೊಗಳನ್ನು ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಅವರನ್ನು ಬಳಸಿಕೊಳ್ಳುತ್ತಿದ್ದ. ಈತನ ಟಾರ್ಗೆಟ್ ಜಿಎಸ್ಟಿ ಮತ್ತು ಕಸ್ಟಮ್ಸ್ ಅಧಿಕಾರಿಗಳಾಗಿದ್ದರು. ಸುಮಾರು 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದ ಎಂದು ತಿಳಿದು ಬಂದಿದೆ.

ಕೃಪಲಾನಿ ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಎರಡು ಬಾರಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ. ಆತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕರೆತಂದ ವೇಳೆ ಗಲಾಟೆ ಮಾಡಿದ್ದ, ಪೊಲೀಸ್ ಅಧಿಕಾರಿಯಿಂದ ಮೊಬೈಲ್ ಫೋನ್ ಕಸಿದುಕೊಂಡು ಅವರ ಮೇಲೆ ಹಲ್ಲೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ,ಆತ ಮತ್ತೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ವರದಿಯಾಗಿದೆ.

ಈ ಘಟನೆಗಳ ನಂತರ, ಕಮರ್ಷಿಯಲ್ ಸ್ಟ್ರೀಟ್ ಮತ್ತು ವಿವಿ ಪುರಂ ಪೊಲೀಸ್ ಠಾಣೆಗಳಲ್ಲಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಮತ್ತು ಹಲ್ಲೆಗಾಗಿ ಆತನ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com