ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ

2022ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ಸಮೀಪ ತುಂಗಾ ನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ
Updated on

ಬೆಂಗಳೂರು: 2022ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ಸಮೀಪ ತುಂಗಾ ನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈಗಾಗಲೇ ಇಬ್ಬರು ಅಪರಾಧಿಗಳಿಗೆ ತಲಾ 6 ವರ್ಷ ಶಿಕ್ಷೆ ವಿಧಿಸಲಾಗಿದೆ.

ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಎನ್ಐಎ 12 ಆರೋಪಿಗಳನ್ನು ಬಂಧಿಸಿತ್ತು. ಇನ್ನು 9 ಆರೋಪಿಗಳ ವಿಚಾರಣೆಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮುಂದುವರೆಸಿದೆ. ಐಸಿಸ್ ಉಗ್ರ ಸಂಘಟನೆಯ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಮತ್ತು ಉಗ್ರ ಚಟುವಟಿಕೆಗೆ ಹಣ ಸಂಗ್ರಹ ಹಾಗೂ ಯುವಕರನ್ನು ಒಗ್ಗೂಡಿಸಿದ ಆರೋಪ ಅರಾಫತ್ ಮೇಲಿದ್ದು, ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರು ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ
ಪರಮೇಶ್ವರ್ ಗೆ ಬೆಟ್ಟಿಂಗ್ ಸಂಕಷ್ಟ: FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com