

ಬೆಂಗಳೂರು: ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು ಪರೀಕ್ಷಿಸಿದಾಗ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 11.11 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದರ ಮೌಲ್ಯ ರೂ. 3.89 ಕೋಟಿ ಎಂದು ಬೆಂಗಳೂರು ಕಸ್ಟಮ್ಸ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ವ್ಯಕ್ತಿಯ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
Advertisement