2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!

ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ನಡೆದಿದ್ದ ಈ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.
File image
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು. ಶೇ.91.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ನಡೆದಿದ್ದ ಈ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಮೂವರು ವಿದ್ಯಾರ್ಥಿಗಳು 625 ಅಂಕಕ್ಕೆ625 ಅಂಕ ಪಡೆದಿದ್ದಾರೆ. 7 ಲಕ್ಷದ 24 ಸಾವಿರದ 794 ಮಕ್ಕಳು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

File image
ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕ

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ. 7 ಲಕ್ಷದ 24 ಸಾವಿರದ 794 ಮಕ್ಕಳು ಪಾಸ್ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com