ಕೊಡಗು ಅತ್ಯಾಚಾರ ಪ್ರಕರಣ: ವಿದೇಶಿಯರ ಮೇಲೆ ಹೀಗಾದರೆ ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಭಾವನೆ ಬರುತ್ತದೆ..?

ಕೊಡಗಿನಲ್ಲಿರುವ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು, ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ.
File photo
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ಗಂಭೀರವಾದ ಪ್ರಕರಣವಾಗಿದೆ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಪ್ರಶ್ನೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.

ಹೋಂ ಸ್ಟೇಗಳಲ್ಲಿ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಪ್ರಮಾಣಿತ ಕಾರ್ಯ ವಿಧಾನಗಳ ಸುತ್ತೋಲೆಯನ್ನು ಹೊರಡಿಸಲಾಗಿದೆ. ಎಲ್ಲಾ ಹೋಂ ಸ್ಟೇನ ಮಾಲೀಕರು ಅದನ್ನು ಪಾಲನೆ ಮಾಡಬೇಕು. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಹೋಂ ಸ್ಟೇಗಳು ನೋಂದಣಿಯಾಗಿರಬೇಕು. ವಿವಿಧ ಸಂಸ್ಥೆಗಳಿಂದ ಅಗತ್ಯವಿರುವ ಪರವಾನಗಿಗಳನ್ನು ಪಡೆದುಕೊಳ್ಳಬೇಕು ಎಂದರು.

ಕೊಡಗಿನಲ್ಲಿರುವ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು, ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ ಎಂದು ಪ್ರಶ್ನಿಸಿದರು.

ಘಟನೆಯ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿರಬಹುದು. ಪೊಲೀಸರು ಅದನ್ನೆಲ್ಲಾ ಗಮನಿಸುತ್ತಾರೆ. ಅತ್ಯಾಚಾರ ಮಾಡಿದವರು ಜಾರ್ಖಂಡ್‌ನವರು ಎಂದು ಹೇಳಲಾಗಿದೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

File photo
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ

ಮಾಹಿತಿಗಳ ಪ್ರಕಾರ, ದೌರ್ಜನ್ಯಕ್ಕೊಳಗಾದ ಬಳಿಕ ಮಹಿಳೆ ಕೊಡಗಿನಿಂದ ಮೈಸೂರಿಗೆ ತೆರಳಿ ಅಲ್ಲಿಂದಲೇ ಅಮೆರಿಕ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ತಕ್ಷಣ ಕ್ರಮ ಕೈಗೊಂಡ ರಾಯಭಾರ ಕಚೇರಿ ಮೈಸೂರು ಪೊಲೀಸರಿಗೆ ಇಮೇಲ್ ಮೂಲಕ ಸಂಪರ್ಕಿಸಿ, ಸಂತ್ರಸ್ತ ಮಹಿಳೆಯನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಪ್ರಾರಂಭದಲ್ಲಿ ಮಹಿಳೆ ಪೊಲೀಸರಿಗೆ ಅಧಿಕೃತ ಹೇಳಿಕೆ ನೀಡಲು ನಿರಾಕರಿಸಿದ್ದರೂ, ನಂತರ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹೋಂಸ್ಟೇಯಲ್ಲಿ ತನ್ನ ಚಲನವಲನವನ್ನು ನಿರ್ಬಂಧಿಸಲಾಗಿತ್ತು. ವೈಫೈ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು ಎಂದು ಆಕೆ ಆರೋಪಿಸಿದ್ದಾಳೆ. ಇದರಿಂದ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆಂದು ತಿಳಿದುಬದಿದೆ.

ಈ ಪ್ರಕರಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಕೆಲವು ಅಧಿಕಾರಿಗಳು ಕೊಡಗಿಗೆ ಭೇಟಿ ನೀಡಿ ಘಟನೆ ಕುರಿತು ನೇರ ಮಾಹಿತಿ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com