ಮತ್ತೆ ಮರುಕಳಿಸಿದ ಜನಿವಾರ ವಿವಾದ: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದು ಕಳೆದ ವರ್ಷ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ವಿವಾದ ಉಂಟಾಗಿತ್ತು. ಇಂದು ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ಮರುಕಳಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದು ಕಳೆದ ವರ್ಷ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ವಿವಾದ ಉಂಟಾಗಿತ್ತು. ಇಂದು ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ಮರುಕಳಿಸಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಿದೆ.

Representational image
ಜನಿವಾರ ವಿವಾದ: ರಾಜ್ಯ ಸರ್ಕಾರ, KEAಗೆ ಹೈಕೋರ್ಟ್ ನೋಟಿಸ್

ಬೆಂಗಳೂರಿನ ಕಾಲೇಜಿನಲ್ಲಿ ನಡೆದಿದ್ದೇನು?

ನಿನ್ನೆ ಗುರುವಾರ ಸಿಇಟಿ ಪರೀಕ್ಷೆ ಆರಂಭವಾದ ದಿನ ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಲೇಜಿಗೆ ಅಧಿಕಾರಿಗಳ ಭೇಟಿ

ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು, ಎಲ್ಲಿಯೂ ಈ ಬಗ್ಗೆ ದೂರು ನೀಡಬೇಡಿ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ‘ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕೃತ್ಯಗಳು ನಿಲ್ಲಬೇಕು’ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com