

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಈರುಳ್ಳಿ ವ್ಯಾಪಾರಕ್ಕೆಂದು ಬೆಂಗಳೂರಿಗೆ ಬಂದು ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿ, ಬರ್ಬರವಾಗಿ ಕೊಲೆಯಾದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ಕಿಯನ್ನು ತಮಿಳುನಾಡಿನ ರಾಮಚಂದ್ರ ರೆಡ್ಡಿ ಎಂದು ಗುರುತಿಸಲಾಗಿದ್ದು, ಈರುಳ್ಳಿ ವ್ಯಾಪಾರಿಯಾಗಿದ್ದರು.
ಈರುಳ್ಳಿ ವ್ಯಾಪಾರಕ್ಕೆಂದು ಬೆಂಗಳೂರಿಗೆ ಬರುತ್ತಿದ್ದ ರಾಮಚಂದ್ರ ರೆಡ್ಡಿ ಅವರಿಗೆ ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿದೆ. ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರುತ್ತಿದ್ದರು. ಅದರಂತೆ ಶುಕ್ರವಾರ ಸಹ ಮಹಿಳೆಯ ಮನೆಗೆ ತೆರಳಿದ್ದ ವೇಳೆ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮಹಿಳೆಯ ಹೊಸ ಪ್ರಿಯಕರ ಹರೀಶ್ ಎಂಬ ವ್ಯಕ್ತಿ ರಾಮಚಂದ್ರ ರೆಡ್ಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಇತ್ತೀಚಿಗೆ ಮಹಿಳೆಗೆ ಹರೀಶ್ ಎಂಬಾತನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪ್ರೀತಿ ಕೂಡ ಶುರು ಆಗಿದೆ. ಆದ್ರೆ ರಾಮಚಂದ್ರ ರೆಡ್ಡಿ ಬಂದು ಹೋಗುವುದು ಹರೀಶ್ ಗೆ ಗೊತ್ತಾಗಿದ್ದು, ಪ್ರೇಯಸಿಯ ಸಂಬಂಧವನ್ನ ಸಹಿಸದೆ ಆಕ್ರೋಶಗೊಂಡಿದ್ದ. ಅಲ್ಲದೇ ಇದಕ್ಕೆ ಅಂತ್ಯಹಾಡಬೇಕೆಂದು ಪ್ಲ್ಯಾನ್ ಮಾಡಿದ್ದ.
ಇದೇ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿ ಸಹ ನಿನ್ನೆ ಮಹಿಳೆಯ ಮನೆಗೆ ಬಂದಿದ್ದು, ಬಳಿಕ ಅಲ್ಲೇ ಇದ್ದ ದೇವಸ್ಥಾನವೊಂದರ ಬಳಿ ಮಲಗಿದ್ದ. ಇದೇ ಸಮಯಕ್ಕಾಗಿ ಕಾಯುತ್ತಿದ್ದ ಮಹಿಳೆಯ ಪ್ರಿಯಕರ ಹರೀಶ್, ರಾಮಚಂದ್ರ ರೆಡ್ಡಿ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದಾನೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು, ಹರೀಶ್ನನ್ನು ಬಂಧಿಸಿದ್ದಾರೆ.
Advertisement