ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿ

ನದಿಯಲ್ಲಿ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿರುವ ಕಾಡನೆ ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ಎರಗಿದೆ.
elephant attacks
ಆನೆ ದಾಳಿ
Updated on

ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ಇದ್ದಕ್ಕಿದ್ದಂತೆ ದಾಳಿ ನಡೆಸಿದ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಶುಕ್ರವಾರ (ಏ.24) ನಡೆದಿದೆ.

ಪ್ರವಾಸಿಗರು ನದಿಯಲ್ಲಿ ಎಂಜಾಯ್ ಮಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿರುವ ಕಾಡನೆ ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ಎರಗಿದೆ.

ದಾಳಿ ನಡೆಸುತ್ತಿದ್ದಂತೆ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರವಾಸಿಗರ ಮೇಲೆ ಆನೆ ದಾಳಿ ಮಾಡುವ ದೃಶ್ಯ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

elephant attacks
ಸಕಲೇಶಪುರದಲ್ಲಿ ಆನೆ ದಾಳಿ: ETF ಸಿಬ್ಬಂದಿ ಸ್ವಲ್ಪದರಲ್ಲಿ ಪಾರು..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com