Video: ಎಳನೀರು ವ್ಯಾಪಾರಿಯಿಂದ ಬೀದಿ ನಾಯಿ ಮೇಲೆ ಮಚ್ಚಿನಿಂದ ಹಲ್ಲೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ.
vendor attacked a street dog with a machete in KR Puram
ನಾಯಿ ಮೇಲೆ ಹಲ್ಲೆ ಮಾಡಿದ ಎಳನೀರು ವ್ಯಾಪಾರಿ
Updated on

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಬೀದಿನಾಯಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬ ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂಲಗಳ ಪ್ರಕಾರ ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ನಾಯಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ.

vendor attacked a street dog with a machete in KR Puram
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಹಿಳೆ ಧಾರುಣ ಸಾವು, ನವಜಾತ ಅವಳಿ ಶಿಶುಗಳು ಅನಾಥ! Video

ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವರದಿಗಳ ಪ್ರಕಾರ ಗಾಯಗೊಂಡ ನಾಯಿಯನ್ನು ರಕ್ಷಿಸಲಾಗಿದೆ. ಆದರೆ ಅದರ ಬೆನ್ನಿನ ಮೇಲೆ ತೀವ್ರವಾದ ಇರಿತದ ಗಾಯವಾಗಿದ್ದು, ಪ್ರಸ್ತುತ ಅದು ನೋವಿನಿಂದ ಬಳಲುತ್ತಿದೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುವ ನಿರೀಕ್ಷೆಯಿದೆ.

ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಶನಿವಾರ ಎಳನೀರು ಮಾರಾಟಗಾರನೊಬ್ಬ ಬೀದಿ ನಾಯಿಯ ಮೇಲೆ ಹಗಲು ಹೊತ್ತಿನಲ್ಲಿ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com