ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಡಿ.ಕೆ. ಶಿವಕುಮಾರ್‌ ಭೇಟಿ, ವೈದ್ಯರೊಂದಿಗೆ ಚರ್ಚೆ

ಹೀಗಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕಿಮ್ಸ್‌ ಆಸ್ಪತ್ರೆ) ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಡಿ.ಕೆ. ಶಿವಕುಮಾರ್‌ ಭೇಟಿ, ವೈದ್ಯರೊಂದಿಗೆ ಚರ್ಚೆ
Updated on

ಬೆಂಗಳೂರು: ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ವೈದ್ಯರ ಜೊತೆ ಚರ್ಚೆ ನಡೆಸಿದರು.

ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ, ಶಸ್ತ್ರಚಿಕಿತ್ಸೆಯ ನಂತರ ಶ್ವಾಸಕೋಶದ ಸೋಂಕು ಉಲ್ಬಣಗೊಂಡಿತ್ತು. ಹೀಗಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕಿಮ್ಸ್‌ ಆಸ್ಪತ್ರೆ) ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸುಧಾಕರ್ ಅವರ ಚಿಕಿತ್ಸೆ ಮತ್ತು ಪ್ರಸ್ತುತ ಆರೋಗ್ಯ ಸ್ಥಿತಿಗತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡ ಶಿವಕುಮಾರ್‌, ಸುಧಾಕರ್‌ ಅವರ ಕುಟುಂಬ ಸದಸ್ಯರೊಂದಿಗೂ ಚರ್ಚೆ ನಡೆಸಿದರು.

ಸುಧಾಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಶ್ವಾಸಕೋಶಗಳು ಗಮನಾರ್ಹ ಸುಧಾರಣೆ ತೋರಿಸದಿದ್ದರೆ ಶ್ವಾಸಕೋಶ ಕಸಿ ಮಾಡಲು ಪರಿಗಣಿಸಬಹುದು ಎಂದು ಆಸ್ಪತ್ರೆ ಶನಿವಾರ ತಿಳಿಸಿದೆ.

ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಡಿ.ಕೆ. ಶಿವಕುಮಾರ್‌ ಭೇಟಿ, ವೈದ್ಯರೊಂದಿಗೆ ಚರ್ಚೆ
ಸುಧಾಕರ್ ಸ್ಥಿತಿ ಗಂಭೀರ: 'ಪ್ರಜ್ಞೆ ಇಲ್ಲ ಅಂದ್ರೆ ಕಸಿ ಮಾಡಲ್ಲ'; ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಹೇಳಿದ್ದೇನು? Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com