ಚಿತ್ರದುರ್ಗ: KSRTC ಬಸ್ ಪಲ್ಟಿ, 15 ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
Ksrtc bus
ಕೆಎಸ್ ಆರ್ ಟಿಸಿ ಬಸ್ ಪಲ್ಟಿ
Updated on

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಸಮೀಪ ಮಂಗಳವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಹದಿನೈದಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಬಸ್ ಹೆಗ್ಗರೆ ಗ್ರಾಮದ ಸಮೀಪ ಬರುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಹದಿನೈದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಸ್ ಚಾಲಕನಿಗೆ ಮುಂಜಾನೆ ವೇಳೆ ನಿದ್ದೆಯ ಮಂಪರು ಆವರಿಸಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಹದಿನೈದಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Ksrtc bus
ಶಿವಮೊಗ್ಗ: ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ; 17 ಪ್ರಯಾಣಿಕರಿಗೆ ಗಾಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com