ಕಲಬುರಗಿ: ಪತ್ನಿ ಕೊಲೆ ಮಾಡಿ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ; ಮಗು ರಕ್ಷಿಸಿದ ಸ್ಥಳೀಯರು!

ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
Man Dies By Suicide After Killing Wife In Kalaburagi
ಲಕ್ಷ್ಮೀಪುತ್ರ ಹಾಗೂ ಪತ್ನಿ
Updated on

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ(ಕೆ) ಗ್ರಾಮದ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಮದರಾ (ಕೆ) ಗ್ರಾಮದ ಸಮೀಪದ ಬಾವಿಗೆ ಜಿಗಿದಿದ್ದಾನೆ.

ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಗಮನಿಸಿದ ಕೆಲವು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಕೂಡಲೇ ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಕ್ಷ್ಮೀಪುತ್ರ ಬಾವಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

Man Dies By Suicide After Killing Wife In Kalaburagi
ಬೆಂಗಳೂರು: ಪ್ರತಿಷ್ಠಿತ ಕಂಪನಿ ಉದ್ಯೋಗಿ ಪೂಜಾ ನಿಗೂಢ ಸಾವು; ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆ!

ಈ ಘಟನೆ ನಡೆದ ತಕ್ಷಣ ರೇವೂರು ಪೊಲೀಸರು ಮತ್ತು ಸೋಕೋ(SOCO) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ.

ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com