ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ, ಚೇತನ್ ಗೆ ನಿಖಿಲ್ ಖಡಕ್ ತಿರುಗೇಟು!

ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.
Nikhil Kumaraswamy and chetan
ನಿಖಿಲ್ ಕುಮಾರಸ್ವಾಮಿ, ಚೇತನ್ ಅಹಿಂಸಾ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು : ಕನ್ನಡದ ವರನಟ, ಪದ್ಮಭೂಷಣ ದಿವಂಗತ ಡಾ.ರಾಜ್‌ಕುಮಾರ್ ಅವರ ಸಮಾಧಿ ಪ್ರಶ್ನಿಸುವ ಮೂಲಕ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.

ಅಣ್ಣಾವ್ರ ಹೆಸರು ಹೇಳಲು ಯೋಗ್ಯರಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚೇತನ್, ಚುನಾವಣೆಯಲ್ಲಿ ಮೂರು ಬಾರಿ ಸೋತವರಿಗೆ ಯೋಗ್ಯತೆ ಇದೆಯಾ? ಎಂದು ಕೇಳಿದ್ದರು.ಇದಕ್ಕೆ ಇದೀಗ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ. ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ. ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ” ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಟ ಚೇತನ್ ಅಹಿಂಸಾ ಅವರಿಗೆ ಖಡಕ್ ತಿರುಗೇಟು ನೀಡಿದ್ದಾರೆ.

ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜವಾದರೂ ಅವುಗಳಿಗೆ ಒಂದು ಘನತೆ ಇರಬೇಕು” ಎಂದ ಅವರು, ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

Nikhil Kumaraswamy and chetan
ಮಾತನಾಡಲು ಯಾರು ಯೋಗ್ಯರು? ಮೂರು ಬಾರಿ ಸೋತವರಾ ಅಥವಾ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ 'ಫ್ಯಾನ್ ವಾರ್ಸ್' ಪ್ರೇರೇಪಿಸಿದವರಾ?

ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ. ಸಂಸ್ಕಾರ ಮನೆಯಿಂದ ಬರಬೇಕು, ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು. ಕೇವಲ ಪ್ರಚಾರದ ಹಪಾಹಪಿಯಿಂದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com