BBMP ಭಾರೀ ಭ್ರಷ್ಟಾಚಾರ: ರೂ.20,000 ಕೋಟಿ TDR ಕೇಸ್‌ ದಾಖಲೆ ನಾಪತ್ತೆ..!

2007ರಲ್ಲಿ ಜಾರಿಗೆ ಬಂದ ಟಿಡಿಆರ್ ವ್ಯವಸ್ಥೆಯಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲು ಭೂಮಿಯ ಮಾಲೀಕರಿಗೆ ಟಿಡಿಆರ್ ನೀಡಲಾಗುತ್ತಿತ್ತು.
Representative image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ 20 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಟಿಡಿಆರ್‌ ಹಗರಣ ಬೆಳಕಿಗೆ ಬಂದಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಚೇರಿಯಿಂದ 2014-17ರ ಅವಧಿಯ ಮಹತ್ವದ ದಾಖಲೆಗಳು ನಾಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಸ್ತುತ ಭೂಸ್ವಾಧೀನ ಮತ್ತು ಟಿಡಿಆರ್ ಕಚೇರಿಯಿಂದ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿವೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ಮತ್ತು ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಮಂಗಳವಾರ ಆರೋಪಿಸಿದ್ದಾರೆ.

2007ರಲ್ಲಿ ಜಾರಿಗೆ ಬಂದ ಟಿಡಿಆರ್ ವ್ಯವಸ್ಥೆಯಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲು ಭೂಮಿಯ ಮಾಲೀಕರಿಗೆ ಟಿಡಿಆರ್ ನೀಡಲಾಗುತ್ತಿತ್ತು.

ಆದರೆ, ಬಿಬಿಎಂಪಿ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಕೆಲ ಭ್ರಷ್ಟ ಅಧಿಕಾರಿಗಳು ಈ ವ್ಯವಸ್ಥೆಯಲ್ಲಿನ ಲೋಪಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದು ಸಾವಿರಾರು ಕೋಟಿ ಮೊತ್ತದ ಸಾರ್ವಜನಿಕ ಸಂಪನ್ಮೂಲಗಳನ್ನು ಕಾನೂನುಬಾಹಿರವಾಗಿ ತಿರುಗಿಸಲು ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

Representative image
ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸರು ಸಿದ್ದರಾಮಯ್ಯ; ಉಪಚುನಾವಣೆ ಗೆದ್ದರೆ ಕಾಂಗ್ರೆಸ್ ನಿಂದ ಮತ್ತಷ್ಟು ಭ್ರಷ್ಟಾಚಾರ: ಬಿ.ಎಸ್ ಯಡಿಯೂರಪ್ಪ

ಡಿ, ಇ ಮತ್ತು ಎಫ್ ವಲಯಗಳಿಗೆ ಸಂಬಂಧಿಸಿದ ಟಿಡಿಆರ್/ಡಿಆರ್‌ಸಿ (ಡೆವಲಪ್‌ಮೆಂಟ್ ರೈಟ್ಸ್ ಸರ್ಟಿಫಿಕೆಟ್)ಗಳನ್ನು ಅಕ್ರಮವಾಗಿ ಎ, ಬಿ ಮತ್ತು ಸಿ ವಲಯಗಳಲ್ಲಿ ಬಳಸಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಈ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ನಾಪತ್ತೆಯಾಗಿರುವ ದಾಖಲೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com