

ಬೆಂಗಳೂರು: ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ವಿರುದ್ಧ ಸುಹಾಸ್ ಸುಧಾಕರ್ ಬೇಸರ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ, ಹೆಬ್ಬೆಟ್ಟು ಬಳಕೆ ಬಗ್ಗೆ ಹೆಚ್‌ಡಿಕೆ ಹೇಳಿಕೆಯಿಂದ ನೋವಾಗಿದೆ. ನಮ್ಮ ತಂದೆಯ ಅನಾರೋಗ್ಯ ವಿಚಾರ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿದ್ದು ತುಂಬಾ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ.
ನಮ್ಮ ತಂದೆ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆಯಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ ಮಂತ್ರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ 22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.
Advertisement