

ಬೆಂಗಳೂರು: ಹಲವು ದಿನಗಳಿಂದ ಬಿಸಿಲಿನಿಂದ ಬೆಂದು ಹೋಗಿದ್ದ ಬೆಂಗಳೂರು ಜನತೆಗೆ ಕಳೆದ ರಾತ್ರಿ ವರುಣ ತಂಪೆರೆದಿದ್ದನಾದರೂ ಹಲವು ಕಡೆ ದುರಂತಗಳು ನಡೆದು ಹೋಗಿವೆ.
ಸತತ ಭಾರೀ ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಆಲಿಕಲ್ಲು ಮಳೆಗೆ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತೀವ್ರ ಗಾಳಿಗೆ ನಗರದ ಹಲವೆಡೆ ಮರಗಳು ಧರೆಗುರುಳಿದ್ದರೆ, ಅಂಡರ್ ಪಾಸ್ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರ ಸಮಸ್ಯೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿಗೆ ರಸ್ತೆ ಸಂಚಾರ ಬಗ್ಗೆ ಪೊಲೀಸರಿಂದ ಮಾಹಿತಿ
ನಿನ್ನೆಯ ಮಳೆ ಅಬ್ಬರಕ್ಕೆ ಕೆಲ ಪ್ರದೇಶಗಳಲ್ಲಿ ತುಂಬಿದ್ದ ನೀರು ಹಾಗೆಯೇ ಇಂದು ಕೂಡ ಉಳಿದುಕೊಂಡಿದೆ. ಲೌರಿ ಅಂಡರ್‌ಪಾಸ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮಹದೇವಪುರ ಕಡೆಗೆ ನಿಧಾನಗತಿಯ ಸಂಚಾರವಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆ.ಆರ್.ಸರ್ಕಲ್ ಅಂಡರ್ ಪಾಸ್ ಕೂಡ ಜಲಾವೃತವಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿದ್ದಾರೆ.
ಗಾಳಿ ಮಳೆಯ ಅಬ್ಬರಕ್ಕೆ ನಗರದ ವಿವಿಧೆಡೆ ಹಲವು ಮರಗಳು ಮತ್ತು ರೆಂಬೆಗಳು ಧರೆಗೆ ಉರುಳಿವೆ. ರಾತ್ರಿಯಿಂದಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇವುಗಳ ತೆರವು ಮಾಡಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆಯಾದರೂ ಕೆಲವೆಡೆ ತೆರವು ಕಾರ್ಯ ಇನ್ನೂ ಮುಂದುವರಿದಿದೆ.
ಭಾಷ್ಯಂ ವೃತ್ತದ ಬಳಿ ಮರ ಬಿದ್ದಿರುವುದರಿಂದ ಕಾವೇರಿ ಥಿಯೇಟರ್ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂದಿದೆ. ಬಸವನಗುಡಿಯಲ್ಲಿಯೂ ಬೃಹತ್ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ.
ವಿದ್ಯಾಪೀಠ ಸರ್ಕಲ್-ಬಸವನಗುಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದಿದ್ದು, ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸ್ಥ
ರಸ್ತೆಯಲ್ಲೇ ಕೆಟ್ಟುನಿಂತ ವಾಹನ
ಬೊಮ್ಮನಹಳ್ಳಿ ಜಂಕ್ಷನ್ ಬಳಿ ರಸ್ತೆಯಲ್ಲಿವೇ ವಾಹನ ಕೆಟ್ಟು ನಿಂತಿರುವುದರಿಂದ ರೂಪೇನ ಅಗ್ರಹಾರ ಕಡೆಗೆ ನಿಧಾನಗತಿಯ ಸಂಚಾರವಿರುವುದಾಗಿ ಎಕ್ಸ್ ಪೋಸ್ಟ್ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement