ಮಂಗಳೂರು: 2018 ರ ಸಾಮೂಹಿಕ ಅತ್ಯಾಚಾರ ಪ್ರಕರಣ; ಬೆಂಗ್ರೆಯ ನಾಲ್ವರಿಗೆ 20 ವರ್ಷಗಳ ಕಠಿಣ ಶಿಕ್ಷೆ

ಬಳಿಕ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ ಈ ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.
All four arrested are fishermen and residents of Mangaluru
ಸಾಮೂಹಿಕ ಅತ್ಯಾಚಾರ ಪ್ರಕರಣ ಆರೋಪಿಗಳು
Updated on

ಮಂಗಳೂರು: 2018ರಲ್ಲಿ ಪಣಂಬೂರು ಸಮೀಪದ ತೋಟ ಬೆಂಗ್ರೆ ಬೀಚ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಆರೋಪಗಳಡಿ ದಂಡ ವಿಧಿಸಲಾಗಿದೆ. ಸುಮಾರು ಎಂಟು ವರ್ಷಗಳ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಈ ತೀರ್ಪು ಹೊರಬಿದ್ದಿದ್ದು, ಸಂತ್ರಸ್ತೆಗೆ ನ್ಯಾಯ ದೊರೆತಂತಾಗಿದೆ.

ನವೆಂಬರ್ 18, 2018 ರಂದು, ಮಹಿಳೆಯೊಬ್ಬರು ತನ್ನ ಪುರುಷ ಸ್ನೇಹಿತನೊಂದಿಗೆ ತೋಟಾ ಬೆಂಗ್ರೆಗೆ ಭೇಟಿ ನೀಡಿದರು. ತೋಟಾ ಬೆಂಗ್ರೆ ನಿವಾಸಿಗಳು ಮತ್ತು ವೃತ್ತಿಯಲ್ಲಿ ಮೀನುಗಾರರಾದ ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲಿಯನ್ (28) ಮತ್ತು ಅಬ್ದುಲ್ ರಿಯಾಜ್ (40) ಎಂಬ ನಾಲ್ವರು ಪುರುಷರು ಮತ್ತು ಮೂವರು ಅಪ್ರಾಪ್ತ ವಯಸ್ಕರು ಮಹಿಳೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ನಂತರ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು.

ಬಳಿಕ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ ಈ ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.

All four arrested are fishermen and residents of Mangaluru
ಹುಟ್ಟುಹಬ್ಬಕ್ಕೆ ಕರೆದು ದಲಿತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ; ಕಾವಲು ಕಾಯುತ್ತಿದ್ದ ಸಹೋದ್ಯೋಗಿ ಸೇರಿ ಇಬ್ಬರು ಅಂದರ್!

ಜುಲೈ 30, 2026 ರಂದು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ ಎಂದು ಅಭಿಯೋಜನೆಯ (ಸರ್ಕಾರದ) ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್ ನಾಯಕ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಮಹಿಳಾ ಪೊಲೀಸ್ ಠಾಣೆಯು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 341, 323, 354, 376D ಮತ್ತು 506 ರ ಅಡಿಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v-a) ಮತ್ತು 3(1)(w)(i) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಅವರಿಗೆ ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ತಲಾ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ತಲಾ 5,000 ರೂ. ದಂಡ, ಸೆಕ್ಷನ್ 506 ರ ಅಡಿಯಲ್ಲಿ ತಲಾ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ತಲಾ 2,000 ರೂ. ದಂಡ, ಸೆಕ್ಷನ್ 323 ರ ಅಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ತಲಾ 1,000 ರೂ. ದಂಡ ಮತ್ತು ಐಪಿಸಿ ಸೆಕ್ಷನ್ 341 ರ ಅಡಿಯಲ್ಲಿ ತಲಾ 500 ರೂ. ದಂಡವನ್ನು ವಿಧಿಸಲಾಯಿತು. ಮೂವರು ಬಾಲಾಪರಾಧಿಗಳ ವಿರುದ್ಧದ ವಿಚಾರಣೆ ಪ್ರಸ್ತುತ ಬಾಲ ನ್ಯಾಯ ಮಂಡಳಿ (ಜೆಜೆಬಿ) ಮುಂದೆ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com