ಕಾವೇರಿ ಕಿಚ್ಚು: ‘ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’: ಸಿದ್ದರಾಮಯ್ಯ

ಹಿಂದೆ ಅಧಿಕಾರದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಹಲವು ಬಾರಿ ಇಂತಹ ನಿರ್ಣಾಯಕ ಪರಿಸ್ಥಿತಿಗಳನ್ನು ಎದುರಿಸಿವೆ. ಆ ಸಂದರ್ಭಗಳಲ್ಲಿ ಪ್ರತಿಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಂತಿವೆ.
Siddaramaiah calls for bipartisan approach
ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಭೂಮಿ, ನೀರು ಮತ್ತು ಭಾಷೆಗೆ ಸಂಬಂಧಿಸಿದ ವಿಚಾರಗಳು ಎದುರಾದಾಗ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲುವುದು ರಾಜ್ಯದ ರಾಜಕೀಯ ಪರಂಪರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ಸಭೆಯಲ್ಲಿ ಕೆಲವು ಸಲಹೆಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಸಭೆಯ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, “ಭೂಮಿ-ನೀರು-ಭಾಷೆಯ ಪ್ರಶ್ನೆ ಎದುರಾದಾಗ ಪಕ್ಷಭೇದಗಳನ್ನು ಬದಿಗಿಟ್ಟು ರಾಜ್ಯದ ಹಿತಕ್ಕಾಗಿ ಒಗ್ಗಟ್ಟಾಗಿ ನಿಲ್ಲುವುದು ಕರ್ನಾಟಕದ ರಾಜಕೀಯ ಪರಂಪರೆ” ಎಂದು ಹೇಳಿದ್ದಾರೆ.

Siddaramaiah calls for bipartisan approach
ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

ಹಿಂದೆಯೂ ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳು ಇಂತಹ ಹಲವು ಗಂಭೀರ ಸನ್ನಿವೇಶಗಳನ್ನು ಎದುರಿಸಿವೆ. ಆ ಸಂದರ್ಭಗಳಲ್ಲಿ ಪ್ರತಿಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಂತಿದ್ದವು ಎಂದು ಸಿದ್ದರಾಮಯ್ಯ ನೆನಪಿಸಿದ್ದಾರೆ.

“ಹಿಂದೆ ಅಧಿಕಾರದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಹಲವು ಬಾರಿ ಇಂತಹ ನಿರ್ಣಾಯಕ ಪರಿಸ್ಥಿತಿಗಳನ್ನು ಎದುರಿಸಿವೆ. ಆ ಸಂದರ್ಭಗಳಲ್ಲಿ ಪ್ರತಿಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಂತಿವೆ. ಈಗಲೂ ರಾಜ್ಯದ ಹಿತಕ್ಕಾಗಿ ಪ್ರತಿಪಕ್ಷಗಳು ರಚನಾತ್ಮಕ ಸಲಹೆಗಳನ್ನು ನೀಡುವುದರ ಜೊತೆಗೆ ಸರ್ಕಾರದ ಬೆಂಬಲಕ್ಕೆ ನಿಲ್ಲಲಿವೆ ಎಂಬ ವಿಶ್ವಾಸ ನನಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕೆಂಬ ಸಂದೇಶವನ್ನು ಸಿದ್ದರಾಮಯ್ಯ ನೀಡಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ, ಕೆಪಿಸಿಸಿ ಅಧ್ಯಕ್ಷ ಎಚ್.ಕೆ. ಪಾಟೀಲ್, ರಾಜ್ಯ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ, ದೆಹಲಿಯಲ್ಲಿರುವ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com