ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲ: ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು? ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ..!

ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ.
Priyank kharge
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ಈ ವೈಫಲ್ಯದ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, OMR ಶೀಟ್‌ಗಳ ಗೊಂದಲ ಹಾಗೂ ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ.

ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ. ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಗೊಂದಲವಾದ ಪರೀಕ್ಷೆಯನ್ನು ಸಂಬಂಧಿತ ಕೇಂದ್ರದಲ್ಲಿ ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕು. ಜೊತೆಗೆ ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, "ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು?" ಮಾನ್ಯ ಮುಖ್ಯಮಂತ್ರಿಗಳೇ ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

Priyank kharge
ಪೊಲೀಸ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com