ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
AC Kavya Rani
ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ
Updated on

ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ ಡಾ. ರೂಪಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ನಂತರ ರೂಪಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಎರಡನೇ ಕಂತಿನಲ್ಲಿ 5.50 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.

AC Kavya Rani
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ Cooling period ಜಾರಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com