Manual Scavenging: ದಾವಣಗೆರೆಯಲ್ಲಿ ಇಬ್ಬರನ್ನು ಶೌಚ ಗುಂಡಿಗೆ ಇಳಿಸಿದ ಘಟನೆ; ತನಿಖೆಗೆ ಆದೇಶ!

ಸಹಾಯಕ ಕಾರ್ಯಪಾಲಕ ಅಭಿಯಂತರರೊಬ್ಬರು (AEE) ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವಂತೆ ಪ್ರವಾಸಿ ಮಂದಿರದ ಸಿಬ್ಬಂದಿಗೆ ಸೂಚನೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on

ದಾವಣಗೆರೆ: ದಾವಣಗೆರೆಯ ಪಿಡಬ್ಲ್ಯೂಡಿ (PWD) ಪ್ರವಾಸಿ ಮಂದಿರದಲ್ಲಿ ಇಬ್ಬರು ಪೌರಕಾರ್ಮಿಕರನ್ನು ಯಾವುದೇ ರಕ್ಷಣಾ ಸಾಧನಗಳಿಲ್ಲದೆ ಶೌಚ ಗುಂಡಿಗೆ ಇಳಿಸಿದ ಘಟನೆ ನಡೆದ ಒಂದು ವಾರದ ನಂತರ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಈ ಕುರಿತು ಎಫ್‌ಐಆರ್ (FIR) ದಾಖಲಿಸಲು ಮತ್ತು ತನಿಖೆ ನಡೆಸಲು ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಜುಲೈ 27, 2026 ರಂದು ಪ್ರವಾಸಿ ಮಂದಿರದ ಆವರಣದಲ್ಲಿರುವ ತುಂಬಿಕೊಂಡಿದ್ದ ಶೌಚ ಗುಂಡಿಯನ್ನು ಸ್ವಚ್ಛಗೊಳಿಸಲು ಇಬ್ಬರು ಪೌರಕಾರ್ಮಿಕರಿಗೆ ಸೂಚಿಸಲಾಗಿತ್ತು. ಆದರೆ ಅವರಿಗೆ ಕಡ್ಡಾಯವಾದ ಸುರಕ್ಷತಾ ಸಾಧನಗಳನ್ನು ಒದಗಿಸಿರಲಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್) ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೆಮನಿ ದೂರು ಸಲ್ಲಿಸಿದ್ದರು.

ಸಹಾಯಕ ಕಾರ್ಯಪಾಲಕ ಅಭಿಯಂತರರೊಬ್ಬರು (AEE) ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವಂತೆ ಪ್ರವಾಸಿ ಮಂದಿರದ ಸಿಬ್ಬಂದಿಗೆ ಸೂಚನೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸೆಪ್ಟಿಕ್ ಟ್ಯಾಂಕ್‌ಗಳು, ಒಳಚರಂಡಿಗಳನ್ನು ಕೈಯಿಂದ ಸ್ವಚ್ಛಗೊಳಿಸುವುದನ್ನು ನಿಷೇಧಿಸುವ 'ಕೈಯಿಂದ ಮಲ ಹೊರುವವರ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013'ರ ಉಲ್ಲಂಘನೆಯಾಗಿದೆ ಎಂಬ ಕಳವಳವನ್ನು ಈ ಘಟನೆಯು ಹುಟ್ಟುಹಾಕಿದೆ.

ಟಿಎನ್‌ಐಇ (TNIE) ಜೊತೆ ಮಾತನಾಡಿದ ಕಡೆಮನಿ, ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗಗಳು ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೈಯಿಂದ ಮಲವನ್ನು ಸ್ವಚ್ಛಗೊಳಿಸುವ ಪದ್ಧತಿಯ ಮೇಲೆ ಸಂಪೂರ್ಣ ನಿಷೇಧವಿದ್ದರೂ, 21ನೇ ಶತಮಾನದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅಮಾನವೀಯವಾಗಿದೆ. ಕಾನೂನಿನ ಅರಿವಿದ್ದರೂ ಅಧಿಕಾರಿಗಳು ಪೌರಕಾರ್ಮಿಕರನ್ನು ಯಾವುದೇ ರಕ್ಷಣಾ ಸಾಧನಗಳಿಲ್ಲದೆ ಗುಂಡಿಗೆ ಇಳಿಯಲು ಅವಕಾಶ ಮಾಡಿಕೊಟ್ಟಿದ್ದಾರೆ, ಆ ಮೂಲಕ ಅವರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಅವರು ಹೇಳಿದರು.

ಅಲ್ಲದೆ, ಈ ಘಟನೆಯಲ್ಲಿ ಭಾಗಿಯಾದ ಕಾರ್ಮಿಕರಿಗೆ ತಕ್ಷಣದ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿಯನ್ನು ಪಡೆಯುವುದಾಗಿ ತಿಳಿಸಿದರು.

Casual Images
ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಇಂತಹ ಪ್ರಕರಣದಲ್ಲಿ ಯಾರೊಬ್ಬರಿಗೂ ಶಿಕ್ಷೆ ಆಗಿಲ್ಲ ಏಕೆ?; ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಿಗೆ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಿ, ಕೂಲಂಕಷ ತನಿಖೆ ನಡೆಸುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.ಜವಾಬ್ದಾರರೆಂದು ಕಂಡುಬರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com