ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಯಾದಗಿರಿ, ರಾಯಚೂರು, ಗದಗ, ವಿಜಯನಗರ, ಕೊಡಗು, ಕೋಲಾರ, ಉಡುಪಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ದೊರೆತಿಲ್ಲ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ವಿಸ್ತೃತ ಸಚಿವ ಸಂಪುಟದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿದ್ದು, 8 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.

ರಾಜಧಾನಿ ಬೆಂಗಳೂರು ನಗರ ಜಿಲ್ಲೆಗೆ ಅತಿ ಹೆಚ್ಚು ಆರು ಸಚಿವರು ಸ್ಥಾನ ಪಡೆದಿದ್ದು, ಕಲಬುರಗಿ ಜಿಲ್ಲೆಯಿಂದ ಮೂರು ಸಚಿವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಬೆಳಗಾವಿ, ಕೊಪ್ಪಳ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳು ದೊರೆತಿವೆ.

ಇನ್ನು ಬಾಗಲಕೋಟೆ, ಹಾಸನ, ಬಳ್ಳಾರಿ, ಬೀದರ್, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾವೇರಿ, ಮೈಸೂರು, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ ಹಾಗೂ ವಿಜಯಪುರ ಜಿಲ್ಲೆಗಳಿಗೆ ತಲಾ ಒಂದು ಸಚಿವ ಸ್ಥಾನ ಲಭಿಸಿದೆ.

ಆದರೆ, ಯಾದಗಿರಿ, ರಾಯಚೂರು, ಗದಗ, ವಿಜಯನಗರ, ಕೊಡಗು, ಕೋಲಾರ, ಉಡುಪಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ದೊರೆತಿಲ್ಲ.

File photo
ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ; ಪಕ್ಷ ನಿಮ್ಮ ಸೇವೆ ಮರೆಯಲ್ಲ: ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com