ನನ್ನ ರಾಜಿನಾಮೆ ಅಂಗೀಕರಿಸಬೇಡಿ: ಸಿಎಂ ಶಿವಕುಮಾರ್ ಕರೆ ಬೆನ್ನಲ್ಲೇ ಸ್ಪೀಕರ್​ಗೆ ಪತ್ರ ಬರೆದ Congress ಶಾಸಕ ಯಶವಂತರಾಯಗೌಡ

ಸಿಎಂ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಇದೀಗ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ.
Yashwant Raya Gowda
ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್
Updated on

ಬೆಂಗಳೂರು: ಸಿಎಂ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಇದೀಗ ಸ್ಪೀಕರ್​ಗೆ ಪತ್ರ ಬರೆದಿದ್ದು ತಮ್ಮ ರಾಜಿನಾಮೆ ಪತ್ರವನ್ನು ಅಂಗೀಕರಿಸದಂತೆ ಮನವಿ ಮಾಡಿದ್ದಾರೆ.

ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ನಾನು ರಾಜಿನಾಮೆ ನೀಡಿದ್ದೆ. ಇದು ನಿಷ್ಠಾವಂತರು, ಪ್ರಾಮಾಣಿಕರಿಗೆ ಕಾಲವಲ್ಲ, ದೊಡ್ಡ ಷಡ್ಯಂತ್ರವೇ ನಡೆಯುತ್ತಿದೆ. ಈ ವ್ಯವಸ್ಥೆಯ ರಾಜಕಾರಣವೇ ಬೇಡ. ಮನಸ್ಸಿಗೆ ಬಹಳ ನೋವಾಗಿದೆ ಎಂದು ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸ್ಪೀಕರ್​ಗೆ ಪತ್ರ ಬರೆದಿರುವ ಯಶವಂತರಾಯಗೌಡ ಅವರು ನನ್ನ ರಾಜಿನಾಮೆಯನ್ನು ಹಿಂಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Yashwant Raya Gowda
ತಮ್ಮ ಪುತ್ರನ ಪ್ರಭಾವ ಕುಗ್ಗುತ್ತದೆಂದು ತನ್ವೀರ್ ಸೇಠ್ ಗೆ ಸಚಿವ ಸ್ಥಾನ ತಪ್ಪಿಸಿದ ಮಾಜಿ ಸಿಎಂ: ಎಚ್ ವಿಶ್ವನಾಥ್

ಇನ್ನು ಯಶವಂತರಾಯಗೌಡ ಪಾಟೀಲ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸಿಎಂ ಡಿ.ಕೆ.ಶಿವಕುಮಾರ್, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವು ನಾಯಕರು ರಾಜೀನಾಮೆ ಹಿಂಪಡೆಯುವಂತೆ ಯಶವಂತರಾಯಗೌಡಗೆ ಒತ್ತಾಯಿಸಿದ್ದರು. ಅಲ್ಲದೆ ರಾಜಿನಾಮೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಸಹ ಒತ್ತಾಯಿಸಿತ್ತು.

Yashwant Raya Gowda
ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com