ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ KRS ಜಲಾಶಯದ ನೀರಿನ ಮಟ್ಟ

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.
krs Dam
ಕೆಆರ್ ಎಸ್ ಜಲಾಶಯ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಕಠಿಣ ಸೂಚನೆ ನೀಡಿತ್ತು. ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ ಎಂದು ರೈತರನ್ನು ಕೈ ಕಟ್ಟಿ ಹಾಕಿತ್ತು.

ಆದರೆ ಈಗ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೆಆರ್‌ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂ ನೀರಿನ ಮಟ್ಟ ಭರಪೂರ 105 ಅಡಿ ತಲುಪಿದೆ.

krs Dam
ಆಲಮಟ್ಟಿ, ಕಬಿನಿ ಜಲಾಶಯ ಭರ್ತಿ! KRS ಪರಿಸ್ಥಿತಿ ಏನು? ಇಲ್ಲಿದೆ ರಾಜ್ಯದ ಪ್ರಮುಖ ಆಣೆಕಟ್ಟುಗಳಲ್ಲಿ ನೀರಿನ ವಿವರ

ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರ ಅಧಿಕೃತ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವಲ್ಲಿ ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com