ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ

ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.
Basanagouda daddal
ಬಸನಗೌಡ ದದ್ದಲ್‌online desk
Updated on

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇರುವುದಕ್ಕೆ ಆಡಳಿತಾರೂಢ ಕಾಂಗ್ರೆಸ್ ನ ಹಲವು ಶಾಸಕರು ತೀವ್ರ ಅಸಮಾಧಾನ ಹೊರಹಾಕಿದ್ದು, ಹಲವರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್‌, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Basanagouda daddal
'CM ಡಿ.ಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...': ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?

ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್‌ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com