

ಬೆಂಗಳೂರು: 1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ಬೆಂಗಳೂರಿನ ಹುಳಿಮಾವು ಬೆಸ್ಕಾಂ ಎಇಇ ನಾಗರತ್ನ ಮತ್ತು ಜೆಇ ಸ್ವಾಮಿ ಎಂಬುವರು ಗುತ್ತಿಗೆದಾರ ಅರ್ಷದ್ ವುಲ್ಲಾ ಬಳಿ 1.50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅರ್ಷದ್ ವುಲ್ಲಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇಂದು ಗುತ್ತಿಗೆದಾರ ಅರ್ಷದ್ ವುಲ್ಲಾ ಬಳಿ 1.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸದ್ಯ ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.