ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: KSRTC ಚಾಲಕ ಹಾಗೂ ಕಂಡಕ್ಟರ್ ಸಾವು

ಬಿಡದಿ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
KSRTC bus accident on Bengaluru-Mysuru Expressway
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತOnline Desk
Updated on

ಬಿಡದಿ: ಬಿಡದಿ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಇಂದು ಮುಂಜಾನೆ ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಶೈನಿಂಗ್ (ಸೈನ್) ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ 14 ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ರಾಮನಗರ ತಾಲೂಕಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಅವರಗೆರೆ ಗೇಟ್ (ಬ್ರಿಡ್ಜ್) ಬಳಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಗೊಂಡ ಬಸ್ ಕೇರಳದ ಕೋಝಿಕ್ಕೋಡ್‌ನಿಂದ ಬೆಂಗಳೂರಿನ ಕಡೆಗೆ ಬರುತ್ತಿತ್ತು. ಇನ್ನು, ಮೃತರನ್ನು ಚಾಲಕ ಮಿಥಿಲೇಶ್ ಮತ್ತು ಕಂಡಕ್ಟರ್ ಅರುಣ್ ಎಂದು ಗುರುತಿಸಲಾಗಿದೆ.

KSRTC bus accident on Bengaluru-Mysuru Expressway
ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್‌ ಲಾರಿ ಪಲ್ಟಿ; ಇಬ್ಬರು ದುರ್ಮರಣ

ಅಪಘಾತಕ್ಕೆ ಕಾರಣವೇನು?

ಮುಂಜಾನೆ ಚಾಲನೆ ಮಾಡುವಾಗ ಚಾಲಕನಿಗೆ ನಿದ್ದೆಯ ಮಂಪು ಆವರಿಸಿದ್ದೇ ಈ ದುರಂತಕ್ಕೆ ಪ್ರಾಥಮಿಕ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅದರಂತೆ, ನಿದ್ದೆಯ ಮಂಪರಿನಲ್ಲಿ ಬಸ್ ರಸ್ತೆಯ ಎಡಭಾಗಕ್ಕೆ ಚಲಿಸಿ, ಅಲ್ಲಿ ಅಳವಡಿಸಲಾಗಿದ್ದ ಬೃಹತ್ ಕಬ್ಬಿಣದ ಸೈನ್ ಬೋರ್ಡ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಡಿಕ್ಕಿಯ ರಭಸಕ್ಕೆ ಆ ದೊಡ್ಡ ಸೈನ್ ಬೋರ್ಡ್ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಬಸ್ ಹೆದ್ದಾರಿಯಲ್ಲೇ ಒಂದು ಸೈಡ್ ಗೆ ಪಲ್ಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com