ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ; ನಾಳೆ ಈ ಮಾರ್ಗದಲ್ಲಿ ಎರಡು ಗಂಟೆ ಮೆಟ್ರೋ ಬಂದ್!

ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ:
Namma Metro
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Online Desk
Updated on

ಬೆಂಗಳೂರು: ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ:

ಯಾವ ಮಾರ್ಗ ಬಂದ್?

ನಮ್ಮ ಮೆಟ್ರೋದ ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ಎಂ.ಜಿ. ರಸ್ತೆವರೆಗಿನ ನಿಲ್ದಾಣಗಳ ನಡುವೆ ತುರ್ತು ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 2 ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು BMRCL ತಿಳಿಸಿದೆ.

ಯಾವ ಟೈಮ್ ನಲ್ಲಿ ಮೆಟ್ರೋ ಬಂದ್?

ನಾಳೆ ಅಂದರೆ, ಆಗಸ್ಟ್ 9 ರ ಭಾನುವಾರದಂದು ಬೆಳಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ 2 ಗಂಟೆಗಳ ಕಾಲ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸಂಚಾರ ಇರುವುದಿಲ್ಲ.

ಮುಂದುವರೆದು, ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ವರೆಗೆ ಹಾಗೂ ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ಬೈಯಪ್ಪನಹಳ್ಳಿ ವರೆಗೆ ಮೆಟ್ರೋ ಲಭ್ಯವಿರುತ್ತದೆ. ಇನ್ನುಳಿದಂತೆ, ಹಸಿರು ಮಾರ್ಗ ಹಾಗೂ ಹಳದಿ ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಏತನ್ಮಧ್ಯೆ, ಬೆಳಗ್ಗೆ 9:00 ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ (ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟದವರೆಗೆ) ಮೆಟ್ರೋ ರೈಲುಗಳು ಎಂದಿನಂತೆ ಸಾಮಾನ್ಯವಾಗಿ ಸಂಚರಿಸಲಿವೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

Temporary Suspension of Metro Services
Namma Metro
ಆಗಸ್ಟ್ 7 ರಂದು ನಮ್ಮ ಮೆಟ್ರೋ Green Line ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com