ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು ವಿದ್ಯಾರ್ಥಿ ಸಾವು, ಅನುಮಾನ ವ್ಯಕ್ತಪಡಿಸಿದ ಪೋಷಕರು!

ಶಿವಮೊಗ್ಗದ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು 15 ವರ್ಷದ ಜಿ.ಕೆ ವಿನಯ್ ಎಂದು ಗುರುತಿಸಲಾಗಿದೆ.
Student GK Vinay
ವಿದ್ಯಾರ್ಥಿ ಜಿಕೆ ವಿನಯ್
Updated on

ಶಿವಮೊಗ್ಗ: ಶಿವಮೊಗ್ಗದ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು 15 ವರ್ಷದ ಜಿ.ಕೆ ವಿನಯ್ ಎಂದು ಗುರುತಿಸಲಾಗಿದೆ. ಸದ್ಯ ವಿನಯ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಇಂದು ಕೆಲವರು ಚೆಸ್ ಆಡುತ್ತಿರುವುದನ್ನು ವಿನಯ್ ನೋಡುತ್ತ ನಿಂತಿದ್ದನು. ಆದರೆ ಅದೇನಾಯಿತು ದಿಢೀರ್ ಅಂತ ಕುಸಿದು ಬಿದ್ದಿದ್ದು ಕೂಡಲೇ ಶಿಕ್ಷಕರು ವಿನಯ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆತನ ಸ್ಥಿತಿ ಗಂಭೀರವಾಗಿದ್ದರಿಂದ ಪಿಹೆಚ್​ಸಿ ಆಸ್ಪತ್ರೆಯಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Student GK Vinay
ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com