ದಕ್ಷಿಣ ಕನ್ನಡ ಡಿಸಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು

ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ.
Dakshina Kannada DC
ದಕ್ಷಿಣ ಕನ್ನಡ ಡಿಸಿ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಪ್ರದರ್ಶಿಸಲಾಗಿದ್ದು, ಇದಕ್ಕೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ. ಆದರೆ ಇಲ್ಲಿ ಸಂಗಾತಿಯ ಹೆಸರು ಸೇರಿಸಿರುವುದು ಸರ್ಕಾರಿ ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಾ ಕುಳಾಯಿ ಪತ್ರದಲ್ಲಿ ಉಲ್ಲೇಖಿಸಿ ಆರೋಪಿಸಿದ್ದಾರೆ.

Dakshina Kannada DC
ನನ್ನ ಮಗಳಿಗೆ ಕಥುವಾ ಸಂತ್ರಸ್ತೆಯ ಹೆಸರಿಡುವೆ: ಪ್ರತಿಭಾ ಕುಳಾಯಿ

ಒಂದು ವೇಳೆ ಈ ನಾಮಫಲಕದ ತಯಾರಿಕೆ ಮತ್ತು ಅಳವಡಿಕೆಗೆ ಸಾರ್ವಜನಿಕ ಹಣ ವಿನಿಯೋಗವಾಗಿದ್ದರೆ, ಅದು ನಿಯಮಬಾಹಿರವಾಗುತ್ತದೆ. ಈ ಕುರಿತು ವೆಚ್ಚದ ದಾಖಲೆಗಳು, ಬಿಲ್‌ಗಳು ಹಾಗೂ ಶಿಷ್ಟಾಚಾರದ ಮಂಜೂರಾತಿಯನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ನಾಮಫಲಕ ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಾದ್ಯಂತ ಸರ್ಕಾರಿ ನಿವಾಸಗಳಲ್ಲಿ ಏಕರೂಪದ ಮಾರ್ಗಸೂಚಿ ಹೊರಡಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com