ಜೈಲಿನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ಕೈದಿ ಪ್ರಜ್ವಲ್ ರೇವಣ್ಣ-Viral Video

ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಜೈಲು ಆಡಳಿತದ ಭದ್ರತಾ ವ್ಯವಸ್ಥೆ ಹಾಗೂ ನಿಯಮಗಳ ಪಾಲನೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
Prajwal Revanna speaks in mobile
ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಮಾತನಾಡುತ್ತಿರುವುದು
Updated on

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲಿನ ಕೊಠಡಿಯೊಳಗೆ ವೈಯಕ್ತಿಕ ಉಡುಪು ಧರಿಸಿ, ಜೈಲು ಸಮವಸ್ತ್ರವಿಲ್ಲದೆ ಆರಾಮವಾಗಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ಯಾವ ದಿನ ಚಿತ್ರೀಕರಿಸಲಾಗಿದೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

ನಿನ್ನೆ ಸಿಸಿಬಿ ಅಧಿಕಾರಿಗಳು ಜೈಲು ಕೊಠಡಿಯ ಮೇಲೆ ದಾಳಿ ನಡೆಸಿದಾಗ, ಒಂದು ಮೊಬೈಲ್ ಫೋನ್ ಪತ್ತೆಯಾಗಿತ್ತು.ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಜೈಲು ಆಡಳಿತದ ಭದ್ರತಾ ವ್ಯವಸ್ಥೆ ಹಾಗೂ ನಿಯಮಗಳ ಪಾಲನೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ಈ ಘಟನೆಗೆ ಸಂಬಂಧಿಸಿದಂತೆ ಜೈಲು ಸಹಾಯಕ ಅಧೀಕ್ಷಕ ಇರಣ್ಣ ರಂಗಾಪುರ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

Prajwal Revanna speaks in mobile
ಜೈಲಿನಲ್ಲಿದ್ದರೂ ಬಿಡದ ಚಟ: ಮಾಜಿ JDS ಸಂಸದ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ, ವಿಡಿಯೋ ಪತ್ತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com