ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ ಕೆ ಶಿವಕುಮಾರ್

ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.
CM D K Shivakumar
ಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.

ರಕ್ಷಣಾ ವೇದಿಕೆಯ ಪ್ರಮುಖ ನಾಯಕರು ನಮ್ಮನ್ನು ಭೇಟಿ ಮಾಡಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ರಾಜ್ಯದ ಹಿತಾಸಕ್ತಿಗಾಗಿ ನಿಲುವು ತೆಗೆದುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಅವರಿಗೆ ನನ್ನ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ" ಎಂದು ಅವರು ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು.

CM D K Shivakumar
ಕಾವೇರಿ ಕಿಚ್ಚು: ನಾಳೆ ಕರ್ನಾಟಕ ಬಂದ್! ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com