ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ: CM ಡಿಕೆ.ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಕರ್ನಾಟಕದ ಕಾವೇರಿ ಹಿತಾಸಕ್ತಿಯ ಬಗ್ಗೆ ಗಮನ ಹರಿಸುವ ಬದಲು ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್‌ ಮತ್ತು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿಯಾಗುವುದರಲ್ಲೇ ಡಿಕೆಶಿ ಹೆಚ್ಚು ಆಸಕ್ತಿ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
HD kumaraswamy
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಇದೇ ವೇಳೆ ಕಾವೇರಿ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಿಂದ ರಾಜ್ಯದ ಕಾನೂನು ತಂಡವನ್ನೇ ದೂರ ಇಡಲಾಗಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕ ಸರ್ಕಾರ ಕಾವೇರಿ ನೀರಿನ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಆದರೆ, ತಮಿಳುನಾಡು ತನ್ನ ಹಿತಾಸಕ್ತಿಗಾಗಿ ನಿರಂತರವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಇದೇ ವೇಳೆ ಕರ್ನಾಟಕದ ಜಲಸಂಪನ್ಮೂಲ ಸಚಿವರಾಗಿ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿ ಬಳಿಕ ಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್‌ ಅವರ ಸಿದ್ಧತೆಯನ್ನೂ ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಕಾವೇರಿ ಹಿತಾಸಕ್ತಿಯ ಬಗ್ಗೆ ಗಮನ ಹರಿಸುವ ಬದಲು ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್‌ ಮತ್ತು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿಯಾಗುವುದರಲ್ಲೇ ಡಿಕೆಶಿ ಹೆಚ್ಚು ಆಸಕ್ತಿ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಬುಧವಾರ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಸುಪ್ರೀಂ ಕೋರ್ಟ್‌ ಹಾಗೂ ಕಾವೇರಿ ಸಂಬಂಧಿತ ಪ್ರಾಧಿಕಾರಗಳು ಮತ್ತು ಸಮಿತಿಗಳ ಮುಂದೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಹಿರಿಯ ಕಾನೂನು ಸಲಹೆಗಾರರನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಸಂಪರ್ಕಿಸಿಲ್ಲ ಎಂದು ದೂರಿದರು.

HD kumaraswamy
ಕಾವೇರಿ ಕಿಚ್ಚು: ನಾಳೆ ಕರ್ನಾಟಕ ಬಂದ್! ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿಯಲ್ಲಿ ಮುಖ್ಯಮಂತ್ರಿ ಶಿವಕುಮಾರ್‌ ಕರೆದಿದ್ದ ಕರ್ನಾಟಕದ ಸಂಸದರ ಸಭೆಯನ್ನು ಉಲ್ಲೇಖಿಸಿದ ಅವರು, ಹಿರಿಯ ವಕೀಲ ಮೋಹನ್‌ ಕಟಾರ್ಕಿ ಅವರಿಗೆ ಸಭೆಯಲ್ಲಿ ಕುಳಿತುಕೊಳ್ಳಲು ಕುರ್ಚಿಯನ್ನೂ ಒದಗಿಸಿರಲಿಲ್ಲ. ಇದರಿಂದ ಅವರು ಸಭೆಯಿಂದ ಹೊರನಡೆದರು.

ಇಂತಹ ಮಹತ್ವದ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ಬೆಂಗಳೂರಿನ ಕೃಷ್ಣಾ ಕಚೇರಿಯಲ್ಲಿ ನಂತರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾನೂನು ತಜ್ಞರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ಪ್ರಕರಣವು ಸುಪ್ರೀಂ ಕೋರ್ಟ್‌, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ ಅನುಭವ ಹೊಂದಿರುವ ಕಾನೂನು ತಜ್ಞರ ಸಲಹೆಯನ್ನು ಕಡೆಗಣಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಸಂಕಷ್ಟ ಹಂಚಿಕೆ ಸೂತ್ರದ ಕುರಿತು ಆದೇಶವೇ ಇಲ್ಲ

“ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಸೂತ್ರದ ಕುರಿತು ಸುಪ್ರೀಂ ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ ಸರ್ಕಾರ ಸಕ್ರಿಯವಾಗಿ ಒತ್ತಾಯಿಸಬೇಕಿತ್ತು” ಎಂದು ಹೇಳಿದರು.

ಕರ್ನಾಟಕದಿಂದ ಜೂನ್‌ನಲ್ಲಿ ನೀರು ಬಿಡುವ ಸಾಧ್ಯತೆ ಇರುವುದಕ್ಕೂ ಮುನ್ನವೇ ಮೇ ತಿಂಗಳಲ್ಲೇ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಸಂಪರ್ಕಿಸಿತ್ತು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com