ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ

ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.
HD Kumaraswamy and cm dk shivakumar
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಡಿಕೆ ಶಿವಕುಮಾರ್
Updated on: 

ಬೆಂಗಳೂರು: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ನೈಸ್ ರಸ್ತೆಯಲ್ಲಿ ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ (BMICP) ಅಕ್ರಮಗಳ ಬಗ್ಗೆ ಕುಮಾರಸ್ವಾಮಿಯವರು ಪತ್ರದಲ್ಲಿ ಉಲ್ಲೇಖಿಸಿದ್ದು, ನೈಸ್ ಸಂಸ್ಥೆ ಈ ನೆಲದ ಕಾನೂನು ಹಾಗೂ ಫ್ರೇಮ್​​ ವರ್ಕ್​​ ಅಗ್ರಿಮೆಂಟ್​​ ಉಲ್ಲಂಘಿಸಿದೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

ಕರ್ನಾಟಕ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ತೀರ್ಪುಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಹಾಗೂ ವಿಧಾನಸಭೆ ಸದನ ಸಮಿತಿ ಮತ್ತು ಸಚಿವ ಸಂಪುಟದ ಉಪ ಸಮಿತಿಗಳ ಶಿಫಾರಸುಗಳಲ್ಲಿ ದಾಖಲಿಸಿರುವಂತೆ ನೈಸ್‌ ಸಂಸ್ಥೆ BMICP ಯೋಜನೆ ಅನುಷ್ಠಾನದಲ್ಲಿ ಫ್ರೇಮ್​​ ವರ್ಕ್​​ ಅಗ್ರಿಮೆಂಟ್(FWA) ಮತ್ತು ಪ್ರಾಜೆಕ್ಟ್​​ ಟೆಕ್ನಿಕಲ್​​ ಅಗ್ರಿಮೆಂಟ್​​ (PTA) ಗಳಲ್ಲಿರುವ ನಿಬಂಧನೆ ಮತ್ತು ಷರತ್ತುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತಕ್ಷಣ ಜಾರಿಗೆ ಬರುವಂತೆ ನಿಷೇಧಿಸಬೇಕು.

ಅಲ್ಲದೆ, ಒಂದು ಶಾಸನವನ್ನು ರಚಿಸುವ ಮೂಲಕ ನೈಸ್ ರಸ್ತೆ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.

HD Kumaraswamy and cm dk shivakumar
'ನನಗೆ ಪ್ರಹ್ಲಾದ ಜೋಷಿಯೂ ಬೇಕು, ಕುಮಾರಸ್ವಾಮಿ ಜತೆಗೂ ಕೆಲಸ ಮಾಡಲು ರೆಡಿ ಇದ್ದೀನಿ, ಒಗ್ಗಟ್ಟಿನಿಂದ ಕರ್ನಾಟಕ ಕಟ್ಟೋಣ': ಡಿ.ಕೆ ಶಿವಕುಮಾರ್; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com