

ಚಿಕ್ಕಬಳ್ಳಾಪುರ: ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿತ್ತು. ಮೃತರನ್ನು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!
ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.